ಮಡಿಕೇರಿ, ನ.೧೬ : ತಾ. ೧೮ ರಂದು (ನಾಳೆ) ಕನಕದಾಸರ ಜಯಂತಿ ಆಚರಣೆ ಸಂಬAಧ ಜಿಲ್ಲಾಧಿಕಾರಿ ವೆಂಕಟ್ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕನಕದಾಸರ ಜಯಂತಿ ಪ್ರಯುಕ್ತ ನಗರದ ಗಾಂಧಿಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಎಲ್ಲರೂ ಸಹಕರಿಸುವಂತೆ ಕೋರಿದರು.
ಎಸ್ಎಸ್ಎಲ್ಸಿ, ಪಿಯುಸಿ, ನೀಟ್, ಜೆಇಇ ಹೀಗೆ ಮತ್ತಿತರ ಕ್ಷೇತ್ರಗಳÀಲ್ಲಿ ಸಾಧನೆ ಮಾಡಿದವರನ್ನು ಪ್ರೋತ್ಸಾಹಿಸುವಲ್ಲಿ ಅಗತ್ಯ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದರು. ಸಂಗೋಳ್ಳಿ ರಾಯಣ್ಣ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಡಿ.ಆರ್.ಪ್ರಭಾಕರ್ ಅವರು ಮಾತನಾಡಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಕುಶಾಲನಗರದಲ್ಲಿಯೂ ಸಹ ತಾಲ್ಲೂಕು ಮಟ್ಟದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಕುರುಬ ಸಮಾಜವು ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಬರಲಿದ್ದು, ಆದಿವಾಸಿ ಮಕ್ಕಳನ್ನು ಪ್ರೋತ್ಸಾಹಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಕುಶಾಲನಗರ ತಾಲೂಕು ಮಟ್ಟದಲ್ಲಿ ಕನಕದಾಸರ ಜಯಂತಿಯನ್ನು ತಹಶೀಲ್ದಾರರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ ಅವರು ಮಾತನಾಡಿ ಎಸ್ಎಸ್ಎಲ್ಸಿ, ಪಿಯುಸಿ, ನೀಟ್, ಜೆಇಇ ಮತ್ತಿತರ ಕೋರ್ಸ್ಗಳಿಗೆ ಪ್ರವೇಶ ಪಡೆದವರನ್ನು ಗೌರವಿಸಬೇಕು ಎಂದು ಹೇಳಿದರು.
ಸಂಗೋಳಿ ರಾಯಣ್ಣ ಕುರುಬ ಸಮಾಜದ ಗೌರವ ಅಧ್ಯಕ್ಷ ಸಿ.ಕೆ.ಉದಯ್ ಕುಮಾರ್ ಅವರು ಮಾತನಾಡಿ ಕನಕದಾಸ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು. ಜೊತೆಗೆ ಆದಿವಾಸಿ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.
ಕುರುಬ ಸಮಾಜದ ಪ್ರಮುಖರಾದ ಬರಮಣ್ಣ ಬೆಟ್ಟಗೇರಿ, ಮಲ್ಲೇಶ್, ರಮೇಶ್, ವಸಂತ, ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್, ಜಿ.ಪಂ.ಎAಜಿನಿಯರ್ ಸುರೇಶ್ ಕುಮಾರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪಿಎಂಜಿಎಸ್ವೈ ಎಂಜಿನಿಯರ್ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ರೇಖಾ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್, ಮಣಜೂರು ಮಂಜುನಾಥ್ ಇತರರು ಇದ್ದರು.