ಸುಂಟಿಕೊಪ್ಪ, ನ. ೧೬: ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ ೧೭ನೇ ವರ್ಷದ ಓಣಂ ಆಚರಣೆಯನ್ನು ತಾ. ೧೮ ರಂದು ಅದ್ದೂರಿಯಾಗಿ ನಡೆಸಲಾಗುವುದು ಎಂದು ಮಲಯಾಳಿ ಸಮಾಜದ ಅಧ್ಯಕ್ಷ ಎಂ.ಆರ್. ಶಶಿಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೧.೩೦ ಗಂಟೆಗೆ ೧೭ನೇ ವರ್ಷದ ಓಣಂ ಆಚರಣೆ ನಡೆಯಲಿದ್ದು, ಸಮಾರಂಭದ ಉದ್ಘಾಟನೆಯನ್ನು ಮಡಿಕೇರಿ ವಿಧಾಸಭಾ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ನೇರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಎಂ.ಆರ್. ಶಶಿಕುಮಾರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಆರ್. ಸುಕುಮಾರ್, ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ. ವಿಜಯನ್, ಕೊಡಗು ಜಿಲ್ಲಾ ಮಲಯಾಳಿ ಸಮಾಜ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಕೊಡಗು ಜಿಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್‌ಕುಮಾರ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್, ಮಡಿಕೇರಿ ಎಸ್.ಎನ್.ಡಿ.ಪಿ. ಅಧ್ಯಕ್ಷ ಟಿ.ಆರ್. ವಾಸುದೇವ, ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್, ವiಲಯಾಳಿ ಸಮಾಜದ ಮಾಜಿ ಅಧ್ಯಕ್ಷರುಗಳಾದ ಪಿ.ಸಿ. ಮೋಹನ್, ವಿ.ಎ. ಸಂತೋಷ್, ವಿಜಯ ಪ್ಲಾಂಟೇಶನ್ ಮಾಲೀಕ ಎಸ್.ಜಿ. ಶ್ರೀನಿವಾಸ್ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಲಯಾಳಿ ಸಮಾಜದ ಅಧ್ಯಕ್ಷ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.