ಮಡಿಕೇರಿ, ನ. ೧೬: ಮಡಿಕೇರಿ ವಕೀಲರ ಸಂಘದ ಕ್ರೀಡಾ ದಿನಾಚರಣಾ ಕಾರ್ಯಕ್ರಮ ತಾ. ೧೮ ರಂದು (ನಾಳೆ) ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ಅವರು ಬೆಳಿಗ್ಗೆ ೯ ಗಂಟೆಗೆ ನೆರವೇರಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭ ಸಂಜೆ ೪ ಗಂಟೆಗೆ ನಡೆಯಲಿದೆ.