ಗೋಣಿಕೊಪ್ಪಲು, ನ. ೧೬: ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಕ್ರೀಡೋತ್ಸವವು ಜರುಗಿತು. ಕ್ರೀಡಾಕೂಟವನ್ನು ಶಾಲೆಯ ಹಳೆಯ ವಿದ್ಯಾರ್ಥಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್. ಅರುಣ್ ಮಾಚಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅರುಣ್ ಮಾಚಯ್ಯ, ಕ್ರೀಡೆಯು ವ್ಯಕ್ತಿಯ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪೂರಕವಾಗಿದೆ. ಗ್ರಾಮೀಣ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಇಂದು ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಸರ್ಕಾರವು ಕ್ರೀಡಾ ಕ್ಷೇತ್ರಕ್ಕೆ ಉತ್ತಮ ರೀತಿಯ ಸಹಕಾರ ನೀಡುತ್ತಿದ್ದು ಸಾಕಷ್ಟು ಪ್ರತಿಭೆ ಹೊರಹೊಮ್ಮುತ್ತಿದೆ. ಮಾಯಮುಡಿ ಶಾಲೆಯಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ವಿವಿಧ ಕ್ಷೇತ್ರದಲ್ಲಿ ಮಾಡಿದ್ದಾರೆ. ಬಹುತೇಕ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರುವ ಪ್ರಯತ್ನವಾಗಿದೆ. ಶಾಲೆಯ ಶತಮಾನೋತ್ಸವ ಯಶಸ್ವಿಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಉತ್ತಮ ರೀತಿಯಲ್ಲಿ ಕಳೆದೆರಡು ತಿಂಗಳಿನಿAದ ಶ್ರಮಿಸುತ್ತಿದ್ದಾರೆ ಎಂದರು.

ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಟಿಪ್ಪು ಬಿದ್ದಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಮಾಯಮುಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಶತಮಾನೋತ್ಸವ ಸಮಿತಿಯ ಖಜಾಂಚಿ ಎಸ್.ಎಸ್. ಸುರೇಶ್, ಸಣ್ಣುವಂಡ ವಿಶ್ವನಾಥ್, ಕ್ರೀಡೋತ್ಸವ ಸಮಿತಿಯ ಅಧ್ಯಕ್ಷ ಪುಚ್ಚಿಮಾಡ ರಾಯ್ ಮಾದಪ್ಪ, ಸೇರಿದಂತೆ ಸಮಿತಿಯ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ವಿ ಸ್ವಾಗತಿಸಿ, ಆಪಟ್ಟಿರ ಟಾಟು ಮೊಣ್ಣಪ್ಪ ವಂದಿಸಿದರು. ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಾರ್ವಜನಿಕರು, ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕ್ರೀಡೋತ್ಸವ ಕಾರ್ಯಕ್ರಮದ ಅಂಗವಾಗಿ ಕಾವೇರಿ ಕಾಲೇಜಿನ ಪ್ರೊ. ರೇವತಿ ಪೂವಯ್ಯ, ಮುಂದಾಳತ್ವದಲ್ಲಿ ವಿದ್ಯಾರ್ಥಿಗಳು ಕೊಡವ ಸಾಂಪ್ರದಾಯಿಕ ಉಮ್ಮತ್ತಾಟ್ ಪ್ರದರ್ಶನ ನಡೆಸಿಕೊಟ್ಟರು. ಸುತ್ತಮುತ್ತಲಿನ ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.