ಮಡಿಕೇರಿ, ನ. ೧೬: ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ಮುಕ್ತಾಯ ಸಮಾರಂಭ, "ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ" ದಿನಾಚರಣೆ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ತಾ.೨೦ ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಈ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಪೂರ್ವಾಹ್ನ ೧೦.೩೦ ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿ

ದ್ದಾರೆ.

(ಮೊದಲ ಪುಟದಿಂದ) ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ವಹಿಸಲಿದ್ದು, ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕöÈತರಾದ ರಾಣಿ ಮಾಚಯ್ಯ ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಬಿ.ಎ. ರಮೇಶ್ ಚಂಗಪ್ಪ, ಕೊಡಗು ಜಿಲ್ಲಾ ಸಹಕಾರ ಯುನಿಯನ್ ಹಾಗೂ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎನ್.ಎಂ. ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾದ ಪಿ.ಸಿ. ಅಚ್ಚಯ್ಯ, ಪ್ರೇಮ ಸೋಮಯ್ಯ, ಕೆ.ಎಂ. ತಮ್ಮಯ್ಯ, ಸಿ.ಎಸ್. ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ. ಅಜಯ್ ಕುಮಾರ್, ಪಿ.ಬಿ. ಯತೀಶ್, ವಿ.ಎಸ್. ಶ್ಯಾಮ್ ಚಂದ್ರ, ಎನ್.ಎ. ರ‍್ಯಾಲಿ ಮಾದಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್. ವಿಜಯ್ ಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕಿ ಎಂ.ಎನ್. ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶೈಲಜಾ ಪಾಲ್ಗೊಳ್ಳಲಿದ್ದು, ಮಡಿಕೇರಿಯ ಕೆ.ಐ.ಸಿ.ಎಂ. ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ ದಿನದ ಮಹತ್ವವದ ಕುರಿತು ಮಾತನಾಡಲಿದ್ದಾರೆ.

ಕೊಡಗು ಸಹಕಾರ ರತ್ನ ಪ್ರಶಸ್ತಿಗೆ ಕುಂಬೂರಿನ ಬಿ.ಡಿ. ಮಂಜುನಾಥ್, ಶ್ರೇಷ್ಠ ಸಹಕಾರಿಗಳು ಪ್ರಶಸ್ತಿಗೆ ನಂದಿನೆರವAಡ ಎ.ರವಿ ಬಸಪ್ಪ ಇಬ್ಬಿವಳವಾಡಿ, ಕಾಯಪಂಡ ಟಾಟಾ ಚಂಗಪ್ಪ ವೀರಾಜಪೇಟೆ, ಪಾಸುರ ಎನ್. ಉತ್ತಪ್ಪ, ಮಾದಾಪುರ, ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ, ಸುಂಟಿಕೊಪ್ಪ ಇವರುಗಳನ್ನು ಸನ್ಮಾನಿಸಲಾಗುವುದು ಎಂದು ಮನು ಮುತ್ತಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ನಿರ್ದೇಶಕರುಗಳಾದ ಪಿ.ಬಿ. ಯತೀಶ್ ಕುಮಾರ್, ಕೋಡಿರ ಪ್ರಸನ್ನ ಹಾಗೂ ಮುಖ್ಯ ನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.