ವಕ್ಫ್ ಹೆಸರಲ್ಲಿ ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ
ಬೆಂಗಳೂರು, ನ. ೧೭: ವಕ್ಫ್ ವಿವಾದ ಸಂಬAಧ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದ್ದು, ವಕ್ಫ್ ಹೆಸರಲ್ಲಿ ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತçವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ವಕ್ಫ್ ವಿಚಾರವನ್ನು ಮುಂದಿಟ್ಟುಕೊAಡು ರಾಜ್ಯದಲ್ಲಿ ಕೋಮು-ಗಲಭೆ ನಡೆಸಿ ಶಾಂತಿ ಕದಡುವ ಪ್ರಯತ್ನ ನಡೆದರೆ ಅದನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಲಾಗುವುದು. ಕೋಮು-ಗಲಭೆ ಶಾಂತಿ ಹಾಳು ಮಾಡಲು ಅವರು ಏನಾದರೂ ಮಾಡಬಹುದು. ಅದಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ. ಶಾಂತಿ ಕದಡಲು ಪ್ರಯತ್ನಿಸಿದರೆ ಸುಲಭವಾಗಿ ನಾವು ಬಿಡಲ್ಲ. ಯಾವ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂಬುದನ್ನು ನೀವು ಊಹೆ ಮಾಡಲು ಆಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಬಿಜೆಪಿ ನಾಯಕ ಅನಿಲ್ ಝಾ ಆಪ್ ಸೇರ್ಪಡೆ
ನವದೆಹಲಿ, ನ. ೧೬: ಬಿಜೆಪಿಯ ಪೂರ್ವಾಂಚಲಿ ನಾಯಕ ಮತ್ತು ಕಿರಾರಿಯ ಎರಡು ಬಾರಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಜಾಫ್‌ಗಢ ಶಾಸಕ ಮತ್ತು ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಪಕ್ಷ ತೊರೆದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಅನಿಲ್ ಝಾ ಪಕ್ಷ ಸೇರ್ಪಡೆಯಾದರು. ಮಂಡಿ ಹೌಸ್ ಬಳಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಝಾ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಿರಾರಿಯಿಂದ ಹಾಲಿ ಎಎಪಿ ಶಾಸಕರನ್ನು ಬದಲಾಯಿಸಿ ಝಾ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
ಶಿವಮೊಗ್ಗ, ನ. ೧೭: ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ತಾ. ೧೭ ರಂದು ಬೆಳಿಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮೋದಿಗೆ ನೈಜೀರಿಯಾದ ಅತ್ಯುನ್ನತ ನಾಗರಿಕ ಗೌರವ
ನೈಜೀರಿಯಾ, ನ. ೧೭: ನೈಜೀರಿಯಾ ಸರ್ಕಾರವು ‘ದಿ ಗ್ರಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಗರ್' (ಜಿಸಿಒಎನ್) ಪುರಸ್ಕಾರವನ್ನು ನೀಡಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲಿದೆ ಎಂದು ವರದಿಯಾಗಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಇದರೊಂದಿಗೆ ಮೋದಿ ಅವರು ಈ ಗೌರವ ಸ್ವೀಕರಿಸಿದ ಎರಡನೇ ವಿದೇಶಿ ನಾಯಕ ಎನಿಸಲಿದ್ದಾರೆ. ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನ ರಾಷ್ಟçಗಳಿಗೆ ಐದು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಇಂದು ನೈಜೀರಿಯಾದ ರಾಜಧಾನಿ ಅಬುಜಾ ತಲುಪಿದ್ದಾರೆ. ಅದರೊಂದಿಗೆ ಭಾರತದ ಪ್ರಧಾನಿಯೊಬ್ಬರು ೧೭ ವರ್ಷಗಳ ಬಳಿಕ ಈ ದೇಶಕ್ಕೆ ಭೇಟಿಕೊಟ್ಟಂತಾಗಿದೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ - ತನಿಖೆಗೆ ಒತ್ತಾಯ
ಬೆಂಗಳೂರು, ನ. ೧೭: ಅಬಕಾರಿ ಇಲಾಖೆಯಲ್ಲಿನ ರೂ. ೭೦೦ ಕೋಟಿ ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿ ಬೇಕಾದರೆ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಶೇ. ೪೦ ಪರ್ಸೆಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ೧೦೦ ಪರ್ಸೆಂಟ್ ಭ್ರಷ್ಟರಾಗಿದ್ದಾರೆ ಎಂದು ಕಿಡಿಕಾರಿದರು. ಕಳೆದ ೧೮ ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ೪೦ ವರ್ಷದ ಜೀವನ ತೆರೆದ ಪುಸ್ತಕ ಎಂದ ಅವರು ಇವತ್ತು ಅವರ ತೆರೆದ ಪುಸ್ತಕ ಪುಟಗಳು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ ಎಂದು ತಿಳಿಸಿದರು.
ಗಾಜಾಪಟ್ಟಿಯ ಮೇಲೆ ಇಸ್ರೇಲ್ ಪಡೆ ದಾಳಿ
ಟೆಲ್‌ಅವೀವ್, ನ. ೧೭: ಇಸ್ರೇಲ್ ಪ್ರಧಾನಿ ನಿವಾಸದ ಮೇಲೆ ದಾಳಿ ನಡೆದ ಬೆನ್ನಲ್ಲೇ, ಭಾನುವಾರ ಗಾಜಾಪಟ್ಟಿಯ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ದಾಳಿಯಲ್ಲಿ ಸುಮಾರು ೧೨ ಜನರು ಮೃತಪಟ್ಟಿದ್ದಾರೆ. ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇಂದ್ರೀಯ ಗಾಜಾಪಟ್ಟಿಯ ನಸೀರತ್ ನಿರಾಶ್ರಿತರ ಶಿಬಿರದಲ್ಲಿ ಆರು ಮಂದಿ, ಬುರೇಜ್ ನಿರಾಶ್ರಿತರ ಶಿಬಿರದಲ್ಲಿ ನಾಲ್ವರು ಮತ್ತು ಗಾಜಾದ ಉತ್ತರ-ದಕ್ಷಿಣ ಹೆದ್ದಾರಿಯಲ್ಲಿ ನಡೆದ ದಾಳಿಯೊಂದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಡೀರ್ ಅಲ್-ಬಲಾತ್‌ನಲ್ಲಿರುವ ಅಲ್-ಅಕ್ಷಾ ಹುತಾತ್ಮರ ಆಸ್ಪತ್ರೆ ತಿಳಿಸಿದೆ. ಶನಿವಾರ ಪ್ರಧಾನಿ ಬೆಂಜಮನ್ ನೆತನ್ಯಾಹು ನಿವಾಸದ ಮೇಲೆ ಬಾಂಬ್ ದಾಳಿ ನಡೆಸಿದ್ದರು. ದಾಳಿಯ ವೇಳೆ ಪ್ರಧಾನಿ ಮತ್ತು ಅವರ ಕುಟುಂಬದವರು ನಿವಾಸದಲ್ಲಿ ಇರಲಿಲ್ಲ ಮತ್ತು ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ಈ ಘಟನೆಗೆ ಸಂಬAಧಿಸಿದAತೆ ಇಸ್ರೇಲ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಜಿ.ಟಿ. ದೇವೇಗೌಡಗೂ ಮುಡಾ ಉರುಳು
ಮೈಸೂರು, ನ. ೧೭: ಸಿಎಂ ಸಿದ್ದರಾಮಯ್ಯರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಉರುಳು ಇದೀಗ ಅವರನ್ನು ಹೊಗಳಿದ್ದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರನ್ನೂ ಸುತ್ತಿಕೊಳ್ಳಲಾರಂಭಿಸಿದ್ದು, ನಕಲಿ ದಾಖಲೆ ಸೃಷ್ಟಿಸಿ ತಮ್ಮ ಸಂಬAಧಿಕರಿಗೆ ಬರೋಬ್ಬರಿ ೧೯ ಸೈಟ್ ಹಂಚಿಕೆ ಮಾಡಿಸಿದ ಆರೋಪ ಕೇಳಿಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರ ಸಂಬAಧಿಯೂ ಮುಡಾದಿಂದ ೧೯ ಸೈಟ್ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಜಿ.ಟಿ. ದೇವೇಗೌಡ ಅವರ ಸಹೋದರಿಯ ಮಗ ಮಹೇಂದ್ರ ೧೯ ಸೈಟ್ ಪಡೆದಿದ್ದಾರೆ. ಅಲ್ಲದೆ ಈ ಪ್ರಕ್ರಿಯೆಯಲ್ಲಿ ಜಿ.ಟಿ. ದೇವೇಗೌಡ ತಮ್ಮ ವರ್ಚಸ್ಸು-ಪ್ರಭಾವ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈಜುಕೊಳದಲ್ಲಿ ಮುಳುಗಿ ಮೂವರು ಸಾವು
ಮಂಗಳೂರು, ನ ೧೭: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (೨೧), ಮೈಸೂರು ರಾಮಾನುಜ ರಸ್ತೆ, ಕೆ.ಆರ್. ಮೊಹಲ್ಲಾ ನಿವಾಸಿ ಪಾರ್ವತಿ ಎಸ್. (೨೦), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್. (೨೧) ಎಂದು ಗುರುತಿಸಲಾಗಿದೆ. ವಾರಾಂತ್ಯ ಮೂವರು ಸ್ನೇಹಿತೆಯರು ಮಂಗಳೂರು ಕಡೆಗೆ ಪ್ರವಾಸಕ್ಕೆಂದು ಬಂದಿದ್ದರು. ಇಂದು ಬೆಳಿಗ್ಗೆ ಹೊರವಲಯದ ಬೀಚ್ ಬಳಿ ಬಂದವರು ರೆಸಾರ್ಟ್ಗೆ ಆಗಮಿಸಿ ರೂಂ ಬುಕ್ ಮಾಡಿದ್ದರು. ನಂತರ ಆಟವಾಡಲು ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ಆಟವಾಡುತ್ತಿದ್ದರು. ಈ ವೇಳೆ ಕೊಳದ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಆಯತಪ್ಪಿ ಓರ್ವ ಯುವತಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.