.ಪೊನ್ನಂಪೇಟೆ, ನ. ೧೭ : ಇದೇ ಪ್ರಥಮ ಬಾರಿಗೆ ಕೊಡಗು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಮೈದಾನದಲ್ಲಿ ಆಯೋಜಿಸಲಾಗಿರುವ, ಕೊಡಗು ಮಾಸ್ಟರ್ಸ್ ಚಾಂಪಿಯನ್ ಶಿಪ್ -೨೦೨೪ ಅಂತರ್ ಜಿಲ್ಲಾ ಕ್ರೀಡಾಕೂಟದ ಧ್ವಜಾರೋಹಣವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ ನೆರವೇರಿಸಿದರು. ಮಾಜಿ ಅಂತರರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೂಕಳೇರ ಕುಶಾಲಪ್ಪ ತಮ್ಮ ಉದ್ಯೋಗದ ಅವಧಿಯಲ್ಲಿ ಹಾಗೂ ನಿವೃತ್ತರಾದ ನಂತರ ಶಾರೀರಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಾಸ್ಟರ್ಸ್ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.
ಅAತರರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗ ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಪಡೆಯುವ ಸಲುವಾಗಿ ಹಲವರು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರುತ್ತಾರೆ. ಆದರೆ ಉದ್ಯೋಗ ದೊರೆತ ನಂತರ ಕ್ರೀಡೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುತ್ತಾರೆ. ಇದು ಸರಿಯಲ್ಲ ಉದ್ಯೋಗದಲ್ಲಿರುವಾಗಲೂ ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಇದರಿಂದ ಯುವಜನತೆಯನ್ನು ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು. ಕ್ರೀಡಾಕೂಟದಲ್ಲಿ ಕೊಡಗು, ಮೈಸೂರು, ಉಡುಪಿ, ಹಾಸನ ಹಾಗೂ ಮಂಗಳೂರು ಜಿಲ್ಲೆಯ ೨೭೦ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಇದೇ ಸಂದರ್ಭ ಅಂತರಾಷ್ಟೀಯ ಸ್ಕೀಯಿಂಗ್ ಆಟಗಾರ್ತಿ ತೆಕ್ಕಡ ಭವಾನಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ, ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಕೊಡಗು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಬಲ್ಯಮೀದೇರಿರ ಪ್ರಕಾಶ್, ಕಾರ್ಯದರ್ಶಿ ಮುಲ್ಲೆರ ಪೊನ್ನಮ್ಮ, ಹಿರಿಯ ಸಲಹೆಗಾರರಾದ ಕಿಟ್ಟು ಕಾಳಪ್ಪ, ಕ್ರೀಡಾಕೂಟದ ಮುಖ್ಯ ಸಂಚಾಲಕಿ ಮೂಕಳೇರ ಮೀರ ಅಶೋಕ್ ಇದ್ದರು. ವರದರಾಜ್ ಉಡುಪಿ ಕಾರ್ಯಕ್ರಮ ನಿರೂಪಿಸಿದರು.