ಮಡಿಕೇರಿ, ನ.೧೭ : ಕೊಡಗು ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ೯ ರಿಂದ ೧೬ ವರ್ಷದ ಮಕ್ಕಳಿಗೆ ನೃತ್ಯ, ಚಿತ್ರಕಲೆ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ ಹಾಗೂ ವಾದ್ಯ ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಪ್ರಸಕ್ತ (೨೦೨೪-೨೫) ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು “ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ”ಯಲ್ಲಿ ನಡೆಯಲಿದೆ.
ಸ್ಪರ್ಧೆಯನ್ನು ನಡೆಸುವುದ ರೊಂದಿಗೆ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ, ಭರವಸೆಯ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ೨ ವಿಭಾಗ ಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು.
೯ ರಿಂದ ೧೨, ೧೩ ರಿಂದ ೧೬ ವರ್ಷ ಮಕ್ಕಳಿಗೆ ಶಾಸ್ತಿçÃಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತಿçÃಯ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ.
೯ ರಿಂದ ೧೨, ೧೩ ರಿಂದ ೧೬ ವರ್ಷ ಮಕ್ಕಳಿಗೆ ವಾದ್ಯ ಸಂಗೀತ, ತಬಲ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ. ೯ ರಿಂದ ೧೨, ೧೩ ರಿಂದ ೧೬ ವರ್ಷ ಮಕ್ಕಳಿಗೆ ವಿಜ್ಞಾನ ಸೃಜನಾತ್ಮಕ ಆವಿಷ್ಕಾರ. ೯ ರಿಂದ ೧೨, ೧೩ ರಿಂದ ೧೬ ವರ್ಷ ಮಕ್ಕಳಿಗೆ ಚಿತ್ರ ಕಲೆ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಹಾಗೆಯೇ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳನ್ನು ನವೆಂಬರ್, ೨೮ ರಂದು ನಡೆಯುವ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧಾ ಕಾರ್ಯಕ್ರಮಕ್ಕೆ ಕರೆದೊಯ್ಯಲಾಗುವುದು.
ಆದ್ದರಿಂದ ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ತಾ. ೨೦ ರೊಳಗೆ ದೂರವಾಣಿ ಸಂಖ್ಯೆ: ೬೩೬೩೨೮೫೬೮೫, ೮೬೧೮೮೬೧೫೦೫ ಸಮಯ ೧೦.೩೦ ರಿಂದ ೫ ರವರೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಿ ಕೊಳ್ಳುವಂತೆ ತಿಳಿಸಿದೆ. ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಭಾಗವಹಿಸಲು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.