ಮಡಿಕೇರಿ, ನ. ೧೮: ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐ.ಕ್ಯೂ.ಎ.ಸಿ ವತಿ ಯಿಂದ ಡಿಜಿಟಲ್ ಲೈಬ್ರರಿ ಪೋರ್ಟಲ್ ಉದ್ಘಾ ಟನೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಡಿಜಿಟಲ್ ಲೈಬ್ರರಿ ಪೋರ್ಟಲ್ ಅನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿ ಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಗ್ರಂಥಾಲ ಯದಲ್ಲಿ ಸಮಯವನ್ನು ಹೆಚ್ಚಾಗಿ ಕಳೆಯುತ್ತಿದ್ದರು ಇತ್ತೀಚೆಗೆ ಓದುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಗ್ರಂಥಾಲಯವು ಇದೀಗ ಡಿಜಿಟಲ್ ಆಗಿದೆ ಇದರ ಪ್ರಯೋಜನವನ್ನು ಎಲ್ಲ ವಿದ್ಯಾರ್ಥಿಗಳು ಪಡೆಯಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಮಾತನಾಡಿ, ಗ್ರಂಥಾಲಯದಲ್ಲಿ ಹೆಚ್ಚು ಸಮಯವನ್ನು ಕಳೆದಷ್ಟು ಜೀವನದಲ್ಲಿ ಜ್ಞಾನದ ಅಭಿವೃದ್ಧಿಯನ್ನು ಹೊಂದಲು ಸಾಧ್ಯ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಲೈಬ್ರೆರಿಯನ್ ಪ್ರೊ. ವಿಜಯಲತಾ ಡಿಜಿಟಲ್ ಲೈಬ್ರರಿಯ ಮಹತ್ವವನ್ನು ತಿಳಿಸಿದರು.
ಡಿಜಿಟಲ್ ಲೈಬ್ರರಿ ಪೋರ್ಟಲ್‌ನಲ್ಲಿ ಪಠ್ಯಪುಸ್ತಕ, ಸ್ಮರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಪ್ರಶ್ನೆ ಪತ್ರಿಕೆಗಳು ಹಾಗು ಅನುಕೂಲಕ್ಕೆ ತಕ್ಕಂತೆ ಯಾವುದೇ ಸಮಯದಲ್ಲಿ ಪಡೆಯಬಹುದಾಗಿ ಪೋರ್ಟಲ್ ಮೂಲಕ ಧೀರಜ್ ತಿಳಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿAದ ಡಿಜಿಟಲ್ ಪೋರ್ಟಲ್ ವ್ಯವಸ್ಥೆ ಕಲ್ಪಿಸಲು ಧನಸಹಾಯವನ್ನು ಒದಗಿಸಲಾಗಿತ್ತು. ಹಾಗು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ದೃಷ್ಟಿಯಿಂದ ಇನ್ನಷ್ಟು ಸಹಕಾರ ನೀಡಲಾಗುವುದಾಗಿ ಸಮಿತಿಯು ಭರವಸೆ ನೀಡಿತು.
ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ನಿರ್ದೇಶಕರಾದ ಯಶೋಧ ಪೇರಿಯಂಡ, ಐಚಂಡ ರಶ್ಮಿ ಮೇದಪ್ಪ, ಮಾಗುಲು ಲೋಹಿತ್, ಚರಣ್ ಬಲ್ಯದ, ಪ್ರಶಾಂತ್ ಮುತ್ತಣ್ಣ ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜಯಲತಾ ಸ್ವಾಗತಿಸಿ, ಡಾ. ಶೈಲಶ್ರೀ ನಿರೂಪಿಸಿ, ಪೂರ್ಣಿಮ ವಂದಿಸಿದರು.