ಕುಶಾಲನಗರ, ನ. ೧೯: ಕನ್ನಡ ಸಾಹಿತ್ಯ ಪರಿಷತ್ತು ಹಾರನಹಳ್ಳಿ ಹೋಬಳಿ ಘಟಕ ಮತ್ತು ಆವರ್ತಿ ಗ್ರಾಮ ಘಟಕಗಳ ಸಂಯುಕ್ತ ಆಶ್ರಯದಲ್ಲಿ ತಾ. ೨೧ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಹೋಬಳಿ ಘಟಕದ ಅಧ್ಯಕ್ಷ ಆವರ್ತಿ ಆರ್ ಮಹಾದೇವಪ್ಪ ಮತ್ತು ಕಾರ್ಯಕ್ರಮ ಆಯೋಜಕ ಎ.ಎಂ. ಧರ್ಮ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ೯ ಗಂಟೆಗೆ ಆವರ್ತಿ ಗ್ರಾಮದ ರಾಜಬೀದಿಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.

ಪಿರಿಯಾಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷÀ ನವೀನ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಆವರ್ತಿ ಗ್ರಾಮ ಘಟಕದ ಅಧ್ಯಕ್ಷ ಎ.ಬಿ. ಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ರಂಗಭೂಮಿ ಕಲಾವಿದ ಎಸ್. ಮುರುಗೇಶ್ ಪಾಲ್ಗೊಳ್ಳಲಿದ್ದಾರೆ.

ಮಂಡ್ಯ ಜಿಲ್ಲೆಯ ಪ್ರಖ್ಯಾತ ಹರಿಕಥೆ ವಿದ್ವಾಂಸ ಶಿವಾರ ಉಮೇಶ್ ಮತ್ತು ತಂಡದವರಿAದ ಜಾನಪದ ಹಾಸ್ಯ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಬೆಳಿಗ್ಗೆ ೯ ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

೧೧ ಗಂಟೆಗೆ ಕನ್ನಡ ಸಿರಿ ಸ್ನೇಹ ಬಳಗ ಆಶ್ರಯದಲ್ಲಿ ಕನ್ನಡ ಗೀತ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಉದ್ಘಾಟನೆ ಮಾಡಲಿದ್ದಾರೆ.

ಮಧ್ಯಾಹ್ನ ೨ ಗಂಟೆಯಿAದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸಾರ್ವಜ ನಿಕರಿಗೆ ಮಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಮ್ಯೂಸಿಕಲ್ ಚೇರ್ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳು ವವರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳತಕ್ಕದ್ದು ಎಂದು ಕಾರ್ಯಕ್ರಮ ಸಂಘಟಕರಾದ ಆವರ್ತಿ ಆರ್ ಮಹಾದೇವಪ್ಪ ತಿಳಿಸಿದ್ದಾರೆ.

ಸಂಜೆ ೬ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕನ್ನಡ ನಾಡು ನುಡಿ ಹಾಗೂ ಬದುಕಿನ ಮೌಲ್ಯಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯ ಲಿದ್ದು ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೯೮೪೫೮೦೯೦೪೫ ಅಥವಾ ೯೪೪೮೯೯೫೯೫೧ ಸಂಪರ್ಕಿಸುವAತೆ ಕೋರಿದ್ದಾರೆ.