x

ಕುಶಾಲನಗರ, ನ. ೧೯: ವಿದ್ಯಾರ್ಥಿ ಜೀವನದಲ್ಲೇ ಜ್ಞಾನ ಭಂಡಾರ ಹೆಚ್ಚಿಸಿಕೊಂಡು ಸಮಾಜದ ಉತ್ತಮ ಪ್ರಜೆಗಳಾಗಬೇಕೆಂದು ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ನಾಗೇಶ್ ಕರೆ ನೀಡಿದರು.

ಕುಶಾಲನಗರದ ವಿವೇಕಾನಂದ ಪಿ.ಯು. ಕಾಲೇಜಿನ ಕ್ರೀಡಾ ದಿನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಪೋಷಕರು ಹಾಗೂ ತಾವು ವ್ಯಾಸಂಗ ಮಾಡುವ ಸಂಸ್ಥೆಯ ಘನತೆ ಹೆಚ್ಚಿಸುವ ರೀತಿಯಲ್ಲಿ ಸಾಧನೆ ಮೂಲಕ ಗುರಿ ತಲುಪಬೇಕು ಎಂದರು.

ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆ ನಡೆಸುವುದರಿಂದ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ, ಪೈಪೋಟಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಮಾತನಾಡಿ, ಮಕ್ಕಳಲ್ಲಿ ಆತ್ಮಸ್ಥೆöÊರ್ಯ ತುಂಬುವ ಸಲುವಾಗಿ ಪ್ರತಿ ವರ್ಷ ಕ್ರೀಡಾಕೂಟ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಸಂಸ್ಥೆಯ ಪಿಯು ವಿಭಾಗದ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಮಹಾತ್ಮ ಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ, ಸಂಸ್ಥೆಯ ಖಜಾಂಚಿ ನಂಜಪ್ಪ, ಆಡಳಿತಾಧಿಕಾರಿ ಮಹೇಶ್ ಅಮೀನ್ ಇತರರು ಇದ್ದರು.

ಕಳೆದ ೨ ದಿನದಿಂದ ನಡೆದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.