ಮಡಿಕೇರಿ, ನ. ೧೯: ವಿ. ಬಾಡಗ ಹೈ ಫ್ಲೆöÊಯರ್ಸ್ ಸಂಘದ ವತಿಯಿಂದ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ, ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐನ್‌ಮನೆ ಹೊಂದಿರುವ ಕೊಡವ ಕುಟುಂಬಗಳ ನಡುವೆ ಹಾಕಿ ಪಂದ್ಯಾಟವನ್ನು ಆಯೋಜಿಸ ಲಾಗಿದೆ ಎಂದು ಸಂಘಟನೆ ಅಧ್ಯಕ್ಷ ಅಮ್ಮುಣಿಚಂಡ ರಂಜು ಪೂಣಚ್ಚ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ. ಬಾಡಗದ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಡಿಸೆಂಬರ್ ೪ ರಿಂದ ೮ ರ ತನಕ ಪಂದ್ಯಾಟ ವನ್ನು ಆಯೋಜಿಸಲಾಗಿದ್ದು, ಕಳೆದ ೨ ವರ್ಷಗಳು ಬೇರಳಿನಾಡು ಹಾಗೂ ಕುತ್ತುನಾಡಿನಲ್ಲಿ ಐನ್‌ಮನೆ ಹೊಂದಿರುವ ಕೊಡವ ಕುಟುಂಬಗಳಿಗೆ ಸ್ಪರ್ಧೆಯಲ್ಲಿ ಅವಕಾಶ ನೀಡಲಾಗಿತ್ತು. ಈ ಬಾರಿ ೩ ಗ್ರಾಮಗಳಲ್ಲಿ ಐನ್‌ಮನೆ ಹೊಂದಿರುವ ಕುಟುಂಬಗಳು ಪಂದ್ಯಾಟದಲ್ಲಿ ಭಾಗವಹಿಸ ಬಹುದಾಗಿದೆ. ನಾಲ್ವರು ಕೊಡವ ಅತಿಥಿ ಆಟಗಾರರನ್ನು ಒಂದು ತಂಡದಲ್ಲಿ ಬಳಸಿಕೊಳ್ಳಲು ಅವಕಾಶವಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಮಚ್ಚಾರಂಡ ಪ್ರವೀಣ್ ತಿಮ್ಮಯ್ಯ ಮಾತನಾಡಿ, ಮೂರು ಪಂಚಾಯಿತಿ ವ್ಯಾಪ್ತಿಯಲ್ಲಿ ೫೦ ಕುಟುಂಬಗಳಿದ್ದು, ಪಂದ್ಯಾಟದಲ್ಲಿ ೩೦ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ಬೆಳ್ಳಿ ಟ್ರೋಫಿ ಯೊಂದಿಗೆ, ಆಟಗಾರರಿಗೆ ಬೆಳ್ಳಿ ನಾಣ್ಯವನ್ನು ಬಹುಮಾನ ರೂಪದಲ್ಲಿ ನೀಡಲಾಗುವುದು. ಇದರೊಂದಿಗೆ ವಿವಿಧ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದರ ಆಟಗಾರರಿಗೆ ವೈಯಕ್ತಿಕ ಬಹುಮಾನವೂ ಇರಲಿದೆ ಎಂದು ತಿಳಿಸಿದ ಅವರು, ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಾಕಿ ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ನೋಂದಣಿಗೆ ತಾ. ೨೨ ಕೊನೆಯ ದಿನಾಂಕವಾಗಿದೆ. ನೋಂದಣಿ ಅಥವಾ ಹೆಚ್ಚಿನ ಮಾಹಿತಿಗೆ ೯೪೮೧೮೮೩೭೩೮, ೯೪೮೦೯೦೪೯೯೯ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಸಂಘಟನೆಯ ಉಪಾಧ್ಯಕ್ಷ ಕಂಜಿತAಡ ಪೂವಣ್ಣ, ಕ್ರೀಡಾ ಸಮಿತಿ ಅಧ್ಯಕ್ಷ ಕುಪ್ಪಂಡ ದಿಲನ್ ಬೋಪಣ್ಣ, ಸಲಹಾ ಸಮಿತಿ ಅಧ್ಯಕ್ಷ ಮಳವಂಡ ಗಿರೀಶ್ ಮುದ್ದಯ್ಯ, ಸ್ವಾಗತ ಸಮಿತಿ ಅಧ್ಯಕ್ಷ ಚೇಮಿರ ಪ್ರಭು ಪೂವಯ್ಯ ಹಾಜರಿದ್ದರು.