ಚೆಯ್ಯಂಡಾಣೆ, ನ. ೧೯: ಕಕ್ಕಬ್ಬೆ ಸಮೀಪದ ಯವಕಪಾಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಕೆ.ಕೆ. ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಯವಕಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಸ್ಥಳೀಯ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಇಲಾಖೆಯ ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ. ಶೀಲಾ ಮಾತನಾಡಿ, ಶಾಂತಿ ಯವರು ಕಳೆದ ೨೫ ವರ್ಷಗಳ ಕಾಲ ಅಂಗನವಾಡಿ ಸಹಾಯಕಿಯಾಗಿ ಉತ್ತಮ ರೀತಿಯಲ್ಲಿ ಮಕ್ಕಳಲ್ಲಿ ಬಾಂಧವ್ಯವನ್ನು ಇಟ್ಟುಕೊಂಡು ಕೆಲಸ ವನ್ನು ನಿರ್ವಹಿಸಿದ್ದಾರೆ ಎಂದರು. ಈ ಸಂದರ್ಭ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ, ಅಂಗನವಾಡಿ ಕಾರ್ಯಕರ್ತೆ ಪೊನ್ನು, ಕಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷ ಸುಬ್ರಮಣಿ, ಗ್ರಾ.ಪಂ. ಸದಸ್ಯ ಪ್ರಕಾಶ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು, ಲಕ್ಷಿö್ಮà ಸ್ತಿçà ಶಕ್ತಿ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.