ಮಡಿಕೇರಿ, ನ. ೧೯: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ವರ್ಷಂಪ್ರತಿಯAತೆ ಈ ಬಾರಿಯೂ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಕನ್ನಡ ಮಾಧ್ಯಮದಲ್ಲಿ ಶೇ. ೮೦ಕ್ಕೆ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮ ಶೇ. ೯೦ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ. ೯೦ ಹಾಗೂ ನಗರ ವಿಭಾಗದಲ್ಲಿ ಶೇ. ೯೫ ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಸಿಇಟಿಯಲ್ಲಿ ೧೦೦೦ ರ‍್ಯಾಂಕ್ ಒಳಗಡೆ; ಎನ್‌ಇಇಟಿಯಲ್ಲಿ ರಾಷ್ಟçಮಟ್ಟದಲ್ಲಿ ೫೦೦೦ ರ‍್ಯಾಂಕ್ ಒಳಗಡೆ ಅಂಕ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಸನ್ಮಾನ: ವೈದ್ಯಕೀಯ ಇಂಜಿನಿಯರಿAಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದವರು, ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸರಕಾರದ ವತಿಯಿಂದ ಕೊಡಲ್ಪಡುವ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಪ್ರದರ್ಶನ ತೋರುತ್ತಿರುವ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಅರ್ಹರು ತಾ. ೨೫ ರ ಒಳಗಾಗಿ ಸೂಕ್ತ ದಾಖಲೆ ಸಹಿತ ಗುಡ್ಡೆಮನೆ ಅಪ್ಪಯ್ಯಗೌಡ ರಸ್ತೆಯಲ್ಲಿರುವ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾರ್ಯದರ್ಶಿ ಪೇರಿಯನ ಉದಯಕುಮಾರ್ ತಿಳಿಸಿದ್ದಾರೆ.