ಕೂಡಿಗೆ, ನ. ೧೯: ನಂಜರಾಜಪಟ್ಟಣ ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಕೆ(ಕಾರ್ಮಿಕ ಆಯವ್ಯಯ)ಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮದ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಕೆ, ಅನುಮೋದನೆ ಸೇರಿದಂತೆ ಚರ್ಚೆಗಳು ನಡೆದವು.

ಅಧ್ಯಕ್ಷೆತೆ ವಹಿಸಿದ್ದ ಅಧ್ಯಕ್ಷ ಸಿ.ಎಲ್. ವಿಶ್ವ ಅವರು ಮಾತನಾಡಿ, ಗ್ರಾಮಸ್ಥರ ಮನವಿಯ ಮೇರೆಗೆ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕಾರಣಿಭೂತರಾಗಬೇಕು ಎಂದರು.

ಸಭೆಗೆ ನೋಡೆಲ್ ಅಧಿಕಾರಿಯಾಗಿ ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಎ. ಸ್ವರ್ಣ ಅವರು ಭಾಗವಹಿಸಿz್ದÀರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಲೋಕನಾತ್, ಆರ್.ಕೆ. ಚಂದ್ರು, ಜಾರ್ಜಿ, ಗಿರಿಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸೇರಿದಂತೆ ಕಾರ್ಯದರ್ಶಿ ಹಾಗೂ ಗ್ರಾಮಸ್ಥರು ಹಾಜರಿದ್ದರು.