ಸುಂಟಿಕೊಪ್ಪ: ಸಂತ ಅಂತೋಣಿ ಶಾಲೆಯ ೧೯೮೬-೮೭ನೇ ಸಾಲಿನ ವಿದ್ಯಾರ್ಥಿಗಳು ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿದರು.
ಮಕ್ಕಳ ದಿನಾಚರಣೆಯ ಅಂಗವಾಗಿ ಸಂತ ಅಂತೋಣಿ ಶಾಲಾ ಮಕ್ಕಳಿಗೆ ೧೯೮೬-೮೭ನೇ ಹಳೆಯ ವಿದ್ಯಾರ್ಥಿಗಳು ಶಾಲೆಗೆ ಭೇಟಿ ನೀಡಿ ಅವರುಗಳು ಶಾಲಾ ಮಕ್ಕಳಿಗೆ ವಿಶೇಷ ಭೋಜನ ಹಾಗೂ ಸಿಹಿ ತಿಂಡಿಯನ್ನು ವಿತರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಚೆನ್ನಯ್ಯನಕೋಟೆ: ಲೇಖನಿ ಅಭಿಯಾನವನ್ನು ಸರ್ಕಾರಿ ಪ್ರೌಢಶಾಲೆ ಚನ್ನಯ್ಯನಕೋಟೆಯಲ್ಲಿ ಮಕ್ಕಳ ದಿನಾಚರಣೆಯಂದು ನಡೆಸಲಾಯಿತು. ಮುಖ್ಯೋಪಾಧ್ಯಾಯರಾದ ಕಾವೇರಮ್ಮ ಅವರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ಕವಿತಾ ಕೆ ಡಿ. ಲೇಖನಿ ಅಭಿಯಾನದ ಪ್ರಾಮುಖ್ಯತೆಯನ್ನು ತಿಳಿಸಿದರು.
ವಿಶ್ವಶಾಂತಿಗಾಗಿ ಪರಿಸರ ಸಂರಕ್ಷಣೆಗಾಗಿ, ವಿಶ್ವ ಪ್ರಾಕೃತದ ಪ್ರಸಾರಕ್ಕಾಗಿ ಈ ಅಭಿಯಾನವನ್ನು ಕುಮಾರಿ ಕೆ.ಟಿ. ವಾತ್ಸಲ್ಯ ಅವರು ನಡೆಸಿಕೊಂಡು ಬರುತ್ತಿದ್ದಾರೆ. ಶಿಕ್ಷಕೀಯ ರಾಧ ಚಿತ್ರ, ಆರತಿ, ಹನೀಸ, ರೀಜಾ ಕಾರ್ಯಕ್ರಮದಲ್ಲಿ ಹಾಜರಿದ್ದರು.ಮಡಿಕೇರಿ: ಮಡಿಕೇರಿಯ ಹಿಂದೂಸ್ತಾನಿ ಶಾಲೆಯ ಅಂಗನವಾಡಿ ಯಲ್ಲಿ ಏರ್ಪಡಿಸಿದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ ಉದ್ಘಾಟಿಸಿದರು. ನೆಹರೂ ದೂರದೃಷ್ಟಿಯುಳ್ಳ ನಾಯಕರಾಗಿದ್ದು ಸ್ವಾತಂತ್ರ‍್ಯ ಪಡೆದ ಸಮಯದಲ್ಲಿ ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ ಮಕ್ಕಳ ಶಿಕ್ಷಣ, ಆರೋಗ್ಯ, ಉದ್ಯೋಗಗಳಿಗೆ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ರೂಪಿಸಿದ ಪರಿಣಾಮ ದೇಶದ ಅಭಿವೃದ್ಧಿ ಸಾಧ್ಯವಾಯಿತು. ಮಕ್ಕಳ ಬಗ್ಗೆ ನೆಹರೂರವರಿಗೆ ಇದ್ದ ಅತೀ ಕಾಳಜಿಯನ್ನು ಗಮನಿಸಿ ದೇಶ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಎಂದು ಆಚರಿಸುವ ಮೂಲಕ ಗೌರವಿಸುತ್ತಿದೆ ಎಂದರು.
ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉದ್ಯಮಿ ಕಲೀಲ್ ಬಾಷ ಅಂಗನವಾಡಿಯಲ್ಲಿ ಮಕ್ಕಳು ಉತ್ತಮ ಸಂಸ್ಕಾರವನ್ನು ವಿದ್ಯೆಯ ಜೊತೆ ಕಲಿಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೋರ್ವ ಅತಿಥಿ ಸ್ಥಳೀಯ ಯುವ ಮುಖಂಡ ರವೂಫ್ ಶೇಖ್ ಮಾತನಾಡಿ, ಈ ಅಂಗನವಾಡಿಯ ಅಭಿವೃದ್ಧಿಗೆ ಶಾಸಕ ಡಾ. ಮಂತರ್ ಗೌಡ ಅವರು ಒಂದು ಲಕ್ಷ ರೂಪಾಯಿಗಳನ್ನು ನೀಡಿದ್ದು, ಸದ್ಯದಲ್ಲಿಯೇ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.
ಅಂಗನವಾಡಿ ಮಕ್ಕಳಿಂದ ಛದ್ಮವೇಷ ಪ್ರದರ್ಶನ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್, ಬಾಲ ಮಹಾತ್ಮ ಗಾಂಧಿ, ಡಾಕ್ಟರ್ ಮೇಡಂ, ಕಿತ್ತೂರು ರಾಣಿ ಚೆನ್ನಮ್ಮ, ಕೊಡಗಿನ ಬೆಡಗಿ, ನ್ಯೂಸ್ ಪೇಪರ್ ಗರ್ಲ್ ಸೇರಿದಂತೆ ವಿವಿಧ ವೇಷಗಳಲ್ಲಿ ಮಕ್ಕಳು ಸಂಭ್ರಮಿಸಿದರು.
ಕೆ. ನಿಡುಗಣೆ ಗ್ರಾಮ ಪಂಚಾಯಿತಿ ಸದಸ್ಯರಾದ ಜಾನ್ಸನ್ ಪಿಂಟೋ, ಸ್ಥಳೀಯರಾದ ಮೀನಾಕ್ಷಿ, ಪೂರ್ಣಿಮಾ ವಿಮಲ ರೈ, ರಮೀಝಾ ಸೇರಿದಂತೆ ಸ್ಥಳೀಯರು, ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಮತಿ ಸ್ವಾಗತಿಸಿ, ನಿರೂಪಿಸಿದರು.
ಮಡಿಕೇರಿ: ಅಶೋಕಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನೆರವೇರಿತು ಛದ್ಮವೇಶ ಕಾರ್ಯಕ್ರಮ, ನೃತ್ಯ, ವಿವಿಧ ಆಟಗಳಲ್ಲಿ ಮಕ್ಕಳು ಪಾಲ್ಗೊಂಡರು. ಎಲ್ಲ ಮಕ್ಕಳಿಗೆ ಬಹುಮಾನ ಮತ್ತು ಸಿಹಿ ಹಂಚಲಾಯಿತು.
ಕಾರ್ಯಕ್ರಮದಲ್ಲಿ ಶಾರದಾ ನಾಗರಾಜ್ ನಗರಸಭೆ ಸದಸ್ಯರು, ಮೀನಾಕ್ಷಿ ಮಾಜಿ ನಗರಸಭೆ ಸದಸ್ಯರು, ಪ್ರಬಾರ ಸಾಹಿತ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಾಂಡ ಸವಿತಾ ಕೀರ್ತನ್, ಮೀರಾ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ ರಾಣಿ ಆಶಾ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಬೇಬಿ, ಮಕ್ಕಳ ತಾಯಂದಿರು ಪಾಲ್ಗೊಂಡಿದ್ದರು. ಬಹುಮಾನವನ್ನು ಮಹಿಳಾ ಕಾಲೇಜಿನ ಉಪನ್ಯಾಸಕರಾದ ನಿರ್ಮಲ ಹೂವಯ್ಯ ಪ್ರಾಯೋಜಿಸಿದ್ದರು.
ಶನಿವಾರಸಂತೆ: ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹೇಮಾ ಪರಮೇಶ್ ಮಾತನಾಡಿ, ಭಾರತದಲ್ಲಿ ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲಾಗುತ್ತಿದೆ ಎಂದರು.
ಮುಖ್ಯ ಅತಿಥಿ ವಿದ್ಯಾರ್ಥಿನಿ ಗಾನಶ್ರೀ ಮಾತನಾಡಿ, ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬದ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ ಎಂದರು. ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಆಟೋಟಗಳು ಮತ್ತು ಹಾಡು, ನೃತ್ಯ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿ ಚಿರಾಗ್ ಮಾತನಾಡಿ, ಜವಾಹರಲಾಲ್ ನೆಹರೂ ಅವರನ್ನು ಮಕ್ಕಳೆಲ್ಲರೂ ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಾರೆ. ನೆಹರೂ ಅವರು ಮಕ್ಕಳು ರಾಷ್ಟçದ ಭವಿಷ್ಯವಾಗಿರುವುದರಿಂದ ಅವರಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದರು. ಮುಖ್ಯಶಿಕ್ಷಕ ಹರೀಶ್ ಲಕ್ಷ್ಮಣ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಹಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.
ಗೋಣಿಕೊಪ್ಪಲು: ಮುಂದಿನ ಪೀಳಿಗೆಗೆ ಪರಿಸರವು ಉಳಿಸುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ. ಪ್ರಕೃತಿ ಮಡಿಲನ್ನು ನಾವುಗಳು ಪ್ರೀತಿಸಬೇಕು. ಪ್ರಕೃತಿ ಉಳಿದರಷ್ಟೆ ಮನುಷ್ಯ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಯುವ ಸಮುದಾಯ ತಮ್ಮ ಜವಾಬ್ದಾರಿಯನ್ನು ಶಾಲಾ ದಿನಗಳಲ್ಲಿಯೇ ಅರಿತುಕೊಳ್ಳಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಕರೆ ನೀಡಿದರು.
ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಆನೆ ಮಾನವ ಸಂಘರ್ಷದ ಕಿರು ಚಿತ್ರ ಬಿಡುಗಡೆಗೊಳಿಸಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೀರಾಜಪೇಟೆ ಡಿಸಿಎಫ್ ಜಗನ್ನಾಥ್ ಮಾತನಾಡಿ ಮಕ್ಕಳ ದಿನಾಚರಣೆಯಂದು ತಾವುಗಳು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪ್ರಕೃತಿಗೆ ತಮ್ಮ ಕೊಡುಗೆ ನೀಡಿರುವುದು ಶ್ಲಾಘನೀಯ ಎಂದರು.
ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಆರ್‌ಎಫ್‌ಒ ಶಿವರಾಮ್, ಎನ್‌ಜಿಒಗಳಾದ ವಿನೋದ್ ಕೃಷ್ಣನ್ ಹಾಗೂ ಅನಿತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಪುಟ್ಟಸ್ವಾಮಿ ಸ್ವಾಗತಿಸಿ, ವಿಜ್ಞಾನ ಶಿಕ್ಷಕರಾದ ಪ್ರಕಾಶ್ ನಿರೂಪಿಸಿ ಸಮಾಜ ಶಿಕ್ಷಕರಾದ ನಟರಾಜ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಲ್ಲಿ ಆನೆ ಮಾನವ ಸಂಘರ್ಷದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಬಗ್ಗೆ ಮಕ್ಕಳು ಹಾಗೂ ಸಾರ್ವಜನಿಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಈ ವೇಳೆ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಶಾಲಾ ಆವರಣದಲ್ಲಿ ಪ್ರಾಣಿ ಪಕ್ಷಿಗಳಿಗೆ ಸಹಾಯವಾಗಲು ಅರಣ್ಯ ಇಲಾಖೆಯ ವತಿಯಿಂದ ನೆಲ್ಲಿಕಾಯಿ, ಸೀಬೆ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು. ಇವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಹಿಸಲಾಯಿತು.
ಸುಂಟಿಕೊಪ್ಪ: ಉತ್ತಮವಾದ ನಾಳೆಗಳನ್ನು ಸೃಷ್ಟಿಸುವ ಜವಾಬ್ದಾರಿ ಮಕ್ಕಳ ಕೈಯ್ಯಲ್ಲಿದೆ. ಮಕ್ಕಳನ್ನು ಚೆನ್ನಾಗಿ ಪೋಷಿಸಿ, ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಇದು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ, ಕುಶಾಲನಗರ ತಾಲೂಕು ಪತ್ರರ್ತರ ಸಂಘದ ಗೌರವ ಸಲಹೆಗಾರ ಕೆ. ತಿಮ್ಮಪ್ಪ ಅವರು ಅಭಿಪ್ರಾಯಪಟ್ಟರು.
ಇಲ್ಲಿನ ಸರಕಾರಿ ಪದವಿಪರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಪತ್ರರ್ತರ ಸಂಘದಿAದ ಕೊಡಮಾಡಿದ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಅವರು ಮಾತನಾಡಿ, ಪತ್ರಕರ್ತರು ಶಾಲೆಯ ಬಗ್ಗೆ ಇಟ್ಟಿರುವ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಮಹನೀಯರ ದಿನಾಚರಣೆಗಳನ್ನು ಆಚರಿಸುವಾಗ ಅವರು ಮಾಡಿರುವ ಸಾಧನೆಗಳನ್ನು ಅರಿತು ಅವರಂತೆ ನಡೆಯಲು ಪ್ರೇರಣೆ ಸಿಗುತ್ತದೆ ಎಂದು ನುಡಿದರು.
ಶಿಕ್ಷಕಿ ಚಿತ್ರಾ ಸ್ವಾಗತಿಸಿ, ಶಿಕ್ಷಕಿ ಲಿಯೋನಾ ಕಾರ್ಯಕ್ರಮ ನಿರ್ವಹಿಸಿದರು, ಶಿಕ್ಷಕ ಪ್ರಕಾಶ್ ವಂದಿಸಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ವಿನ್ಸೆAಟ್, ನಿರ್ದೇಶಕ ಆಲ್ಫೆçಡ್ ಡಿಸೋಜ, ಸಹ ಶಿಕ್ಷಕಿ ಶಾಂತ ಹೆಗ್ಡೆ, ಹಾಜರಿದ್ದು ಬಹುಮಾನ ವಿತರಿಸಿದರು. ಮುಳ್ಳೂರು: ಸಮೀಪದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಧ್ವಜರೋಹಣವನ್ನು ನೆರವೇರಿಸಲಾಯಿತು, ನಂತರ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು ಮತ್ತು ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ, ಶಾಲಾ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸೋಮವಾರಪೇಟೆ: ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು.
ಶಾಲಾ ಮಕ್ಕಳಿಗೆ ಗೋಣಿ ಚೀಲದ ಓಟ, ವಿಷದ ಚೆಂಡು, ಸಂಗೀತ ಕುರ್ಚಿ, ಮೆಮೋರಿ ಟೆಸ್ಟ್ ಸೇರಿದಂತೆ ಇನ್ನಿತರ ಸ್ಫರ್ಧೆಗಳು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಶಿಕ್ಷಕರ ಗಮನ ಸೆಳೆದರು.
ಶಾಲಾ ನಾಯಕ ಅಜಿತ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಉಪನಾಯಕಿ ಸಹನಾ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಬಿಬಿಎ ವಿಭಾಗದ ವತಿಯಿಂದ ಮಕ್ಕಳ ದಿನಾಚರಣೆ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಸತತ ಅಭ್ಯಾಸ ಹಾಗೂ ಕಠಿಣ ಪರಿಶ್ರಮದ ಜೊತೆಗೆ ಉತ್ತಮ ಗುರಿಯನ್ನು ಇಟ್ಟುಕೊಂಡು ಮುನ್ನಡೆಯಬೇಕು. ಉತ್ತಮ ಹವ್ಯಾಸದ ಜೊತೆಗೆ ಹೆತ್ತವರಿಗೆ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಗುಣವನ್ನು ಬೆಳೆಸಿಕೊಂಡು ಸಾಧನೆಯ ಮೆಟ್ಟಿಲೇರಬೇಕು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಾದುಗಾರ ರಾಜೇಶ್ ಎರಡು ಗಂಟೆ ಕಾಲ ವಿವಿಧ ಜಾದು ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಪ್ರೊ.ಎಂ. ಎಸ್. ಭಾರತಿ, ಐ ಕ್ಯೂ ಎ ಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎಂ. ಡಿ. ರೇಷ್ಮ, ಬಿ.ಎಸ್. ದೀಪ್ತಿ, ಬಿ ಬಿ ಎ ವಿಭಾಗ ಮುಖ್ಯಸ್ಥ ಅಜಯ್ ಕುಮಾರ್, ಕಚೇರಿ ಅಧೀಕ್ಷಕಿ ಟಿ. ಕೆ. ಲತಾ, ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು.
ಮುಳ್ಳೂರು: ಸಮೀಪದ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಜಂಟಿಯಾಗಿ ಆಚರಿಸಲಾಯಿತು. ಶಾಲಾ ಮುಂಭಾಗದದಲ್ಲಿ ಕನ್ನಡ ಧ್ವಜರೋಹಣ ನೆರವೇರಿಸಿದ ನಂತರ ಮಕ್ಕಳ ದಿನಾಚರಣೆ ಪ್ರಯುಕ್ತ ಕರ್ನಾಟಕದ ವಿವಿಧ ಸ್ತಬ್ದ ಚಿತ್ರದ ಮೆರವಣಿಗೆಯನ್ನು ನಡೆಸಲಾಯಿತು, ಸ್ತಬ್ಧಚಿತ್ರ ಮೆರವಣಿಗೆಯು ಶಾಲೆಯಿಂದ ಹೊರಟು ಮುಖ್ಯರಸ್ತೆ ಮೂಲಕ ಮೊರಾರ್ಜಿ ವಸತಿ ಶಾಲಾ ರಸ್ತೆ ವರೆಗೆ ಸಾಗಿ ನಂತರ ಆಲೂರು ಸಿದ್ದಾಪುರ ಜಂಕ್ಸನ್ , ಪೆಟ್ರೋಲ್ ಬಂಕ್‌ವರೆಗೆ ಸಾಗಿ ಶಾಲೆಗೆ ವಾಪಾಸಾಯಿತು. ಸ್ತಬ್ದಚಿತ್ರ ಮೆರವಣಿಗೆ ಸಂದರ್ಭ ಶಾಲಾ ವಿದ್ಯಾರ್ಥಿಗಳು ರಸ್ತೆಯಲ್ಲಿ ಕಂಸಾಳೆ ನೃತ್ಯ ಇನ್ನು ಮುಂತಾದ ಜಾನಪದ ನೃತ್ಯವನ್ನು ಪ್ರದರ್ಶಿಸಿ ಸಾರ್ವಜನಿಕರನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಟ್ರಸ್ಟಿ ಶಿವಪ್ರಕಾಶ್, ಶಿಕ್ಷಕರು, ಪೋಷಕರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸೋಮವಾರಪೇಟೆ: ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು.
ಶಾಲಾ ಮಕ್ಕಳಿಗೆ ಗೋಣಿ ಚೀಲದ ಓಟ, ವಿಷದ ಚೆಂಡು, ಸಂಗೀತ ಕುರ್ಚಿ, ಮೆಮೋರಿ ಟೆಸ್ಟ್ ಸೇರಿದಂತೆ ಇನ್ನಿತರ ಸ್ಫರ್ಧೆಗಳು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಶಿಕ್ಷಕರ ಗಮನ ಸೆಳೆದರು.
ಶಾಲಾ ನಾಯಕ ಅಜಿತ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಉಪನಾಯಕಿ ಸಹನಾ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಬಿಬಿಎ ವಿಭಾಗದ ವತಿಯಿಂದ ಮಕ್ಕಳ ದಿನಾಚರಣೆ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಸತತ ಅಭ್ಯಾಸ ಹಾಗೂ ಕಠಿಣ ಪರಿಶ್ರಮದ ಜೊತೆಗೆ ಉತ್ತಮ ಗುರಿಯನ್ನು ಇಟ್ಟುಕೊಂಡು ಮುನ್ನಡೆಯಬೇಕು. ಉತ್ತಮ ಹವ್ಯಾಸದ ಜೊತೆಗೆ ಹೆತ್ತವರಿಗೆ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಗುಣವನ್ನು ಬೆಳೆಸಿಕೊಂಡು ಸಾಧನೆಯ ಮೆಟ್ಟಿಲೇರಬೇಕು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಾದುಗಾರ ರಾಜೇಶ್ ಎರಡು ಗಂಟೆ ಕಾಲ ವಿವಿಧ ಜಾದು ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಪ್ರೊ.ಎಂ. ಎಸ್. ಭಾರತಿ, ಐ ಕ್ಯೂ ಎ ಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎಂ. ಡಿ. ರೇಷ್ಮ, ಬಿ.ಎಸ್. ದೀಪ್ತಿ, ಬಿ ಬಿ ಎ ವಿಭಾಗ ಮುಖ್ಯಸ್ಥ ಅಜಯ್ ಕುಮಾರ್, ಕಚೇರಿ ಅಧೀಕ್ಷಕಿ ಟಿ. ಕೆ. ಲತಾ, ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು.
ಕೆದಮುಳ್ಳೂರು : ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿಯಲ್ಲಿ ಮಕ್ಕಳ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಸಾಬಾ ಮುತ್ತಪ್ಪ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಉಷಾ ಕುಮಾರಿ, ಸಹಾಯಕಿ ರೊಶಿನಿ ವಿಲ್ಮಾ, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.