ಮಡಿಕೇರಿ, ನ. ೨೦: ವೀರಾಜಪೇಟೆ ವಿಭಾಗದ ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಕುಕ್ಲೂರು, ಪುದುಕೋಟೆ, ಐಮಂಗಲ, ಚಂಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕಾವಾಡಿ, ಕೊಮ್ಮೆತ್ತೋಡು, ಮಗ್ಗುಲ, ನಲ್ವತೊಕ್ಲು, ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ.೨೧ ರಿಂದ ೨೪ರವರೆಗೆ ಕಾಡಿಗಟ್ಟುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ. ಈ ಸಂದರ್ಭ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕು. ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ವೀರಾಜಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

.