ಚೆಯ್ಯAಡಾಣೆ, ನ. ೨೦: ಕರಡದ ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ತಾ. ೨೨ ರಿಂದ ೨೪ ರವರೆಗೆ ಕಡಿಯತ್‌ನಾಡ್ ಕಪ್ ಹಾಕಿ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಗಣು ಕುಶಾಲಪ್ಪ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ೩ ದಿನಗಳ ಕಾಲ ಪಂದ್ಯಾಟ ನಡೆಯಲಿದೆ.
ಪ್ರಥಮ ಬಾರಿಗೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ ಪಾಂಡAಡ ಕಪ್ ನಡೆದ ಹೆಗ್ಗಳಿಕೆಗೆ ಪಾತ್ರವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುವ ಈ ಹಾಕಿ ಪಂದ್ಯಾವಳಿಯಲ್ಲಿ ಕಡಿಯತ್‌ನಾಡಿಗೆ ಒಳಪಟ್ಟ ಗ್ರಾಮಗಳ ತಂಡಗಳು ಭಾಗವಹಿಸಲಿವೆ.
ಪಂದ್ಯಾಟದಲ್ಲಿ ಬಲಿಷ್ಠ ೧೦ ತಂಡಗಳು ಭಾಗವಹಿಸಲಿದ್ದು ಒಟ್ಟು ೯ ಜನ ಆಟಗಾರರು ಪಾಲ್ಗೊಳ್ಳುವ ತಂಡ ದಲ್ಲಿ ೩ ಜನ ಅತಿಥಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ತಾ. ೨೨ ರಂದು ಬೆಳಿಗ್ಗೆ ೯ ಗಂಟೆಗೆ ಮುಖ್ಯ ಅತಿಥಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ನರಿಯಂದಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚೆಯ್ಯಂಡ ಲೀಲಾವತಿ ಅಪ್ಪಚ್ಚು ಪಾಲ್ಗೊಳ್ಳಲಿದ್ದಾರೆ.
ತಾ. ೨೩ ರಂದು ನಡೆಯುವ ಸೆಮಿಫೈನಲ್ ಪಂದ್ಯಾಟವನ್ನು ವೀರಾಜಪೇಟೆ ವೃತ್ತನಿರೀಕ್ಷಕ ಅನೂಪ್ ಮಾದಪ್ಪ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ತಾ. ೨೪ ರಂದು ಫೈನಲ್ ಪಂದ್ಯಾಟ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಬೇಪಡಿಯಂಡ ಎಸ್. ಬಿದ್ದಪ್ಪ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಕೊಡವ ಕಲ್ಚರಲ್ ಅ್ಯಂಡ್ ರಿಕ್ರಿಯೇಷನ್ ಕ್ಲಬ್ ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಮೇದುರ ಗಣು ಕುಶಾಲಪ್ಪ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ, ಪಾಂಡAಡ ಮೊಣ್ಣಪ್ಪ, ಬೊವ್ವೇರಿಯಂಡ ನಾಚಪ್ಪ, ದೈಹಿಕ ಶಿಕ್ಷಕ ನಂಬಿಯಪAಡ ಅಪ್ಪಣ್ಣ ಹಾಗೂ ರಾಜಕೀಯ, ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಗಣು ಕುಶಾಲಪ್ಪ ಮಾಹಿತಿ ನೀಡಿದರು.
ವಿಜೇತ ತಂಡಕ್ಕೆ ೩೫ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಪಾಂಡAಡ ಮೊಣ್ಣಪ್ಪ, ರನ್ನರ್ಸ್ ತಂಡಕ್ಕೆ ೨೫ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಬೊವ್ವೇರಿಯಂಡ ನಾಚಪ್ಪ, ಮೂರನೇ ಸ್ಥಾನ ಪಡೆದ ತಂಡಕ್ಕೆ ೨೦ ಸಾವಿರ ನಗದು ಹಾಗೂ ಟ್ರೋಫಿಯನ್ನು ನಂಬಿಯಪAಡ ಅಪ್ಪಣ್ಣ ನೀಡಿದ್ದಾರೆ. ವೈಯಕ್ತಿಕ ಬಹುಮಾನ ಕೂಡ ನೀಡಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭ ಕ್ಲಬ್ ಅಧ್ಯಕ್ಷ ಬೇಪಡಿಯಂಡ ಬಿದ್ದಪ್ಪ, ಕೋಶಾಧಿಕಾರಿ ಐತಿಚಂಡ ಪ್ರಕಾಶ್ ಕಾರ್ಯಪ್ಪ, ನಡಿಕೇರಿಯಂಡ ಪೂವಣ್ಣ, ನೆರಪಂಡ ವಾಸು ಕುಶಾಲಪ್ಪ, ಪಾಂಡAಡ ಕಿಶನ್, ಕೋಡಿರ ಮೋಹಿತ್,ಐತಿಚಂಡ ಲೋಹಿತ್, ದಾದಾ ಅಯ್ಯಣ್ಣ ಹಾಗೂ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.