ಮಡಿಕೇರಿ, ನ. ೨೦: ರೈತರ, ಮಠ, ಮಾನ್ಯ ಮತ್ತು ದೇವಾಲಯಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿಯ ಕಾಯ್ದೆ ಹಾಗೂ ಕಾಂಗ್ರೆಸ್ ಸರಕಾರದ ಹಗರಣಗಳು, ತುಷ್ಟೀಕರಣ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ತಾ. ೨೨ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ; ‘ನಮ್ಮ ಭೂಮಿ ನಮ್ಮ ಹಕ್ಕು’ ಎಂಬ ಘೋಷವಾಕ್ಯ ದೊಂದಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಪಕ್ಷ, ಸಾರ್ವಜನಿಕರು, ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. ತಾ. ೨೨ರಂದು ಬೆಳಿಗ್ಗೆ ೧೦ ಗಂಟೆಗೆ ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು, ಮುಖ್ಯರಸ್ತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಸಂಜೆ ೫ ಗಂಟೆವರೆಗೆ ಧರಣಿ ನಡೆಸಲಾಗುವುದೆಂದು ಅವರು ಹೇಳಿದರು.

ನಿಷೇಧಕ್ಕೆ ಆಗ್ರಹ

ದೇಶದ ಸಂವಿಧಾನ ಪವಿತ್ರವಾಗಿದೆಯಾದರೂ, ಇದರ ಅಧೀನಕ್ಕೆ ಬಾರದೆ ವಕ್ಫ್ ಮಂಡಳಿ ರಚನೆ ಮಾಡಿಕೊಂಡು, ಪ್ರತ್ಯೇಕ ಕಾಯ್ದೆ ಮಾಡಿಕೊಂಡು ರೈತರ ಹಾಗೂ ದೇವಾಲಯ, ಮಠಗಳ ಆಸ್ತಿಗಳನ್ನು ಕಬಳಿಸುವ ಹುನ್ನಾರವಾಗುತ್ತಿದೆ. ಈ ಬಗ್ಗೆ ಕಾನೂನಿನಡಿಯಲ್ಲಿ ಪ್ರಶ್ನಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇದೀಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ

ಬಂದ ಬಳಿಕ

(ಮೊದಲ ಪುಟದಿಂದ) ಸಚಿವರಾಗಿರುವ ಜಮೀರ್ ಅಹ್ಮದ್ ಅವರು ಎಲ್ಲಾ ಕಡೆಗಳಿಗೆ ತೆರಳಿ ಅಧಿಕಾರಿಗಳ ಸಭೆ ನಡೆಸಿ ರೈತರ ಆಸ್ತಿಗಳ ದಾಖಲೆಗಳನ್ನು ವಕ್ಫ್ ಮಂಡಳಿಗೆ ಖಾತೆ ವರ್ಗಾವಣೆ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳ ಆದೇಶದಂತೆ ಕೆಲಸ ನಿರ್ವಹಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ರಾಜ್ಯ ಸರಕಾರ ಇದರಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗುತ್ತಿದೆ. ಇದೀಗ ತಾತ್ಕಾಲಿಕವಾಗಿ ಖಾತೆ ವರ್ಗಾವಣೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಇದು ಮತ್ತೆ ಮರುಕಳಿಸುವ ಸಾಧ್ಯತೆಯಿದೆ. ಹಾಗಾಗಿ ವಕ್ಫ್ ಮಂಡಳಿ ಕಾಯ್ದೆಯನ್ನು ಶಾಶ್ವತವಾಗಿ ಹಿಂಪಡೆಯಬೇಕೆAದು ಆಗ್ರಹಿಸಿದರು.

ಸರಕಾರವನ್ನು ವಜಾ ಮಾಡಬೇಕು

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹಗರಣಗಳಲ್ಲಿ ಸಿಲುಕಿಕೊಂಡಿದೆ. ಮುಡಾ ಹಗರಣದಲ್ಲಿ ತನಿಖೆ ಸಂದರ್ಭ ೧೪ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ. ವಾಲ್ಮೀಕಿ ಹಗರಣದಲ್ಲೂ ಮುಖ್ಯಮಂತ್ರಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ರವಿ ಕಾಳಪ್ಪ ಒತ್ತಾಯಿಸಿದರು.

ಅಭಿವೃದ್ಧಿ ಶೂನ್ಯ

ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಜಿಲ್ಲೆಯ ಮುಖ್ಯ ರಸ್ತೆಗಳೇ ಹೊಂಡಗುAಡಿಯಾಗಿವೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಪ್ರತಿ ಗ್ರಾಮಗಳಲ್ಲಿ ಹೊಸ ರಸ್ತೆ, ದುರಸ್ತಿ ಕಾಮಗಾರಿಗಳು ಆಗುತ್ತಿದ್ದವು. ಇದೀಗ ಯಾವುದೂ ಆಗುತ್ತಿಲ್ಲ. ಜಿಲ್ಲೆಯ ಬಡ ರೈತರು ಎಷ್ಟೋ ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ಜಾಗಗಳ ಸರ್ವೆಗೆ ಆದೇಶ ಮಾಡಿ ಅದನ್ನು ಮೀಸಲು ಅರಣ್ಯ ಮಾಡುವುದಾಗಿ ರೈತರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದಾಗಿ ಸಾವಿರಾರು ರೈತರು ಬೀದಿಗೆ ಬೀಳುವ ಸಾಧ್ಯತೆಯಿದೆ.

ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿ ೫ ಎಕರೆಗಿಂತ ಕಡಿಮೆ ಇರುವ ಬಡ ರೈತರ ಜಾಗವನ್ನು ವಿಂಗಡಣೆ ಮಾಡದಂತೆ ಕಂದಾಯ ಇಲಾಖೆ ಮೂಲಕ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಬಡವರಿಗೆ ಅನ್ಯಾಯವಾಗಲಿದ್ದು, ಸರಕಾರ ಸಿರಿವಂತರ ಪರವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ಕಾಳಪ್ಪ ಆರೋಪಿಸಿದರು.

ಬಿಪಿಎಲ್ ರದ್ದು!

ರಾಜ್ಯದ ಜನತೆಗೆ ಉಚಿತ ಭಾಗ್ಯಗಳ ಆಸೆ ತೋರಿಸಿ ಇದೀಗ ಸರಕಾರ ಆರ್ಥಿಕವಾಗಿ ದಿವಾಳಿಯಾದ್ದರಿಂದ ಬಡವರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಮುಂದಾಗಿದೆ. ಕೂಲಿ ಕೆಲಸ ಮಾಡುವ, ಯಾವುದೇ ಆದಾಯ ಇಲ್ಲದವರ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತಿದೆ. ಬಡವರಿಗೆ ಮೋಸ ಮಾಡುವ ಸರಕಾರವನ್ನು ವಿಸರ್ಜನೆ ಮಾಡಬೇಕೆಂದು ಒತ್ತಾಯಿಸಿದ ಕಾಳಪ್ಪ; ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊAಡು ಪ್ರತಿಭಟನೆ ಮಾಡಲಾಗುವುದೆಂದು ಹೇಳಿದರು.

ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಸರಕಾರ ದಿವಾಳಿಯಾಗಿದ್ದು, ಬಡವರು ೨-೩ ತಿಂಗಳು ಪಡಿತರ ಪಡೆದುಕೊಳ್ಳದಿದ್ದರೂ ಅಂತಹವರ ಪಡಿತರ ಚೀಟಿಗಳನ್ನು ರದ್ದುಮಾಡಲಾಗುತ್ತಿದೆ. ತಿಂಗಳಿಗೊAದು ಹಗರಣಗಳಲ್ಲಿ ಸಿಲುಕಿಕೊಳ್ಳುತ್ತಿರುವ ಸರಕಾರ ಸದ್ಯದಲ್ಲೇ ಬೀಳಲಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಉಪಾಧ್ಯಕ್ಷ ಕಾಂಗಿರ ಅಶ್ವಿನ್ ಇದ್ದರು.