ಸೋಮವಾರಪೇಟೆ, ನ. ೨೦: ಪಟ್ಟಣದ ಮಾರುಕಟ್ಟೆ ಆವರಣದಲ್ಲಿ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಿ, ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುವಂತೆ ಮಾಡಬೇಕೆಂದು ಒತ್ತಾಯಿಸಿ ಇಂದಿರಾಗಾAಧಿ ಅಭಿಮಾನಿಗಳ ಸಂಘದಿAದ ಶಾಸಕರ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಇಂದಿರಾ ಕ್ಯಾಂಟೀನ್ ಬಡ ಮಂದಿಗೆ ಹೆಚ್ಚಿನ ಅನುಕೂಲಕರವಾಗಿದ್ದು, ಜಿಲ್ಲೆ ಹಾಗೂ ರಾಜ್ಯದ ಇತರೆಡೆಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುತ್ತಿದೆ. ಆದರೆ ಸೋಮವಾರಪೇಟೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದ್ದು, ತಕ್ಷಣ ಕೆಲಸ ಆರಂಭಿಸಿ ಪೂರ್ಣಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಒತ್ತಾಯಿಸಿದರು.

ಈ ಸಂದರ್ಭ ಉಪಾಧ್ಯಕ್ಷ ಅಜಯ್, ಕಾರ್ಯದರ್ಶಿ ಹೆಚ್.ಬಿ. ರಾಜಪ್ಪ, ಸಲಹೆಗಾರ ಪಳನಿಸ್ವಾಮಿ, ಮಂಜು, ಮೊಹಿದ್ದೀನ್, ಮೋಹನ್, ನಾಗರಾಜು, ರಾಜೇಶ್, ಸಂಗಮೇಶ್, ಕಂಬಳ್ಳಿ ಲೋಕೇಶ್, ಶಿವ ಸೇರಿದಂತೆ ಇತರರು ಉಪಸ್ಥಿತರಿದ್ದರು.