ಮಡಿಕೇರಿ: ನಗರದ ದೇಚೂರು ಬಾಣೆಮೊಟ್ಟೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.

ಪುಟಾಣಿ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ನಡೆದ ಸಭೆಯ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಪಲ್ಲವಿ ವಹಿಸಿದ್ದರು. ಸಭೆಯಲ್ಲಿ ಸಹಕಾರಿ ಬ್ಯಾಂಕಿನ ನಿವೃತ್ತ ಉದ್ಯೋಗಿ ಉಮ್ಮಕ್ಕ, ಆರೋಗ್ಯ ಕಾರ್ಯಕರ್ತೆ ರಂಜಿತ, ಆಶಾ ಕಾರ್ಯಕರ್ತೆ ಶಾಹಿದ, ಸಹಾಯಕಿ ರೋಹಿಣಿ ಉಪಸ್ಥಿತರಿದ್ದರು. ಮಕ್ಕಳಿಗೆ ಫ್ಯಾನ್ಸಿಡ್ರೆಸ್, ಕಾಳು ಹೆಕ್ಕುವುದು, ಕಪ್ಪೆ ಕುಪ್ಪಳಿಸುವ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಅಮುದ ಸ್ವಾಗತಿಸಿ, ನಿರೂಪಿಸಿದರು. ಉಮ್ಮಕ್ಕ ವಂದಿಸಿದರು. ನೆರೆದವರೆಲ್ಲರಿಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಮಡಿಕೇರಿ: ನಗರದ ಪೆನ್‌ಷನ್‌ಲೈನ್ ಅಂಗವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಮಕ್ಕಳ ಪ್ರತಿಭೆಗೆ ಪೋಷಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಈ ಅಂಗನವಾಡಿ ಕೇಂದ್ರ ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದು, ಸರ್ಕಾರದಿಂದ ಕಟ್ಟಡ ನಿರ್ಮಿಸಿದರೆ ಮಕ್ಕಳಿಗೆ ಸಹಕಾರಿಯಾಗಲಿದೆ. ಸಂಬAಧಪಟ್ಟ ಇಲಾಖೆ ಕ್ರಮ ಕೈಗೊಳ್ಳು ವಂತಾಗಬೇಕು ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆ ಬಬಿತಾ, ಸಹಾಯಕಿ, ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪುಟಾಣಿಗಳು ನೇತಾಜಿ ಸುಭಾಷ್‌ಚಂದ್ರ ಬೋಸ್, ಸ್ವಾಮಿ ವಿವೇಕಾನಂದ, ರಾಧಕೃಷ್ಣ, ಹೂ ಮಾರುವ ಹುಡುಗಿ, ಫ್ಯಾಷನ್ ಲೇಡಿ ಸೇರಿದಂತೆ ವಿವಿಧ ಛದ್ಮವೇಷಗಳಲ್ಲಿ ಗಮನ ಸೆಳೆದರು. ವೀರಾಜಪೇಟೆ: ಕಂಡAಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಎ.ಟಿ. ಪವಿನ, ಸಹ ಶಿಕ್ಷಕರಾದ ದೇವರಾಜ್ ಬಿ.ಟಿ. ಕಾರ್ಯಕ್ರಮದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಮಂಜುಳಾ ಬಿ.ಎಂ. ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ನಾಯಕರಾದ ಸುಬ್ರಮಣಿ, ಶಿಕ್ಷಕಿಯರಾದ ಶರಣ್ಯ, ದೇವಿ, ಭಾಗ್ಯ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಚೆಯ್ಯಂಡಾಣೆ: ಬಲ್ಲಮಾವಟಿ ವೃತ್ತದ ಕೂವಲೆಕಾಡು ಹಾಗೂ ಕೊಳಕೇರಿ ಫಸ್ಟ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಅಶ್ರಫ್ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆ. ಶೀಲಾ ಮಾತನಾಡಿ, ಮಕ್ಕಳನ್ನು ದೇವರಂತೆ ಕಂಡ ಮಾನವತಾವಾದಿ ಜವಾಹರ್ ಲಾಲ್ ನೆಹರು ಅವರ ಹುಟ್ಟುಹಬ್ಬವನ್ನು ನಾವೆಲ್ಲರೂ ಮಕ್ಕಳ ದಿನಾಚರಣೆಯನ್ನಾಗಿ ಇಂದು ಆಚರಿಸುತ್ತಾ ಇದ್ದೇವೆ. ಮುಗ್ದ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಮುತುವರ್ಜಿ ವಹಿಸಬೇಕೆಂದರು.

ಅAಗನವಾಡಿ ಕೇಂದ್ರದ ಪುಟಾಣಿಗಳಿಂದ ಅಭಿನಯ ಗೀತೆ, ಕಪ್ಪೆಜಿಗಿತ, ಒಂಟಿ ಕಾಲಿನ ಓಟ, ಹಾಡು ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು.

ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯ ರಾದ ಸಫ್ರೀನಾ, ಶ್ವೇತಾ, ಜಮೀಲಾ, ಗೀತಾ, ಬಾಲವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆಯರು, ಸಿಎಚ್‌ಓಗಳು ಮತ್ತಿತರರು ಉಪಸ್ಥಿತರಿದ್ದರು.