ಮುಳ್ಳೂರು, ನ. ೨೧ : ಕೊಡಗು-ಹಾಸನ ಜಿಲ್ಲಾ ಗಡಿ ಭಾಗದಲ್ಲಿರುವ ಇತಿಹಾಸ ಮತ್ತು ಜಾನಪದ ಸಂಸ್ಕೃತಿ ಹಿನ್ನೆಲೆಯುಳ್ಳ ಹೊಸೂರು ಗ್ರಾಮದ ಶ್ರೀ ಬೆಟ್ಟದ ಬಸವೇಶ್ವರ ಸ್ವಾಮಿಯ ಕೌಟೆಕಾಯಿ ಜಾತ್ರೆ ತಾ. ೨೫ ರಂದು ನಡೆಯಲಿದೆ ಎಂದು ಶ್ರೀ ಬೆಟ್ಟದ ಬಸವೇಶ್ವರ ಸ್ವಾಮಿ ದೇವಸ್ಥಾನ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸೂರು ಗ್ರಾಮದ ಬೆಟ್ಟದ ಮೇಲೆ ಸುಮಾರು ಏಳುನೂರು ವರ್ಷಗಳ ಹಿಂದೆ ನಿರ್ಮಿಸಿದ ಜೈನ ಬಸದಿ ಇದೆ. ಇದರ ಸಮೀಪ ಶ್ರೀ ಬೆಟ್ಟದ ಬಸವೇಶ್ವರ ಸ್ವಾಮಿಯ ದೇವಸ್ಥಾನವನ್ನು ನಿರ್ಮಿಸಲಾಗಿದೆ.

ತಾ. ೨೫ ರಂದು ಹೊಸೂರು ಶ್ರೀ ಬೆಟ್ಟದ ಬಸವೇಶ್ವರ ಸ್ವಾಮಿಯ ಕೌಟೆಕಾಯಿ ಜಾತ್ರೆಯು ಬೆಳಿಗ್ಗೆ ೭ ಗಂಟೆಯಿAದ ಪ್ರಾರಂಭಗೊಳ್ಳಲಿದ್ದು ಬೆಟ್ಟದ ಬಸವೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನೆರವೇರಿದ ನಂತರ ದೇವಸ್ಥಾನದ ಕೆಳ ಭಾಗದಲ್ಲಿರುವ ಸುಗ್ಗಿ ಕಟ್ಟೆವರೆಗೆ ದೇವರ ಅಡ್ಡ ಪಲ್ಲಕ್ಕಿ ಉತ್ಸವ ನಡೆಸಿ ಬೆಟ್ಟದ ಮೇಲೆ ಜಾತ್ರೆಯನ್ನು ನಡೆಸಲಾಗುತ್ತದೆ.

ಜಾತ್ರೋತ್ಸವ ಪ್ರಯುಕ್ತ ಬೆಳಿಗ್ಗೆ ೧೧ ಗಂಟೆಯಿAದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ನಡಯಲಿದ್ದು, ಶನಿವಾರಸಂತೆ ನಾಟ್ಯ ನಿಲಯಂ ನೃತ್ಯ ತರಬೇತಿ ಕೇಂದ್ರದ ನೃತ್ಯ ಕಲಾವಿಧೆಯರಾದ ಜಾಹ್ನವಿ ಆಚಾರ್ಯ, ಗಾನವಿ ಆಚಾರ್ಯ ಸಹೋದರಿಯರಿಂದ ನೃತ್ಯ ವೈಭವ ಹಾಗೂ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಎನ್. ಹರೀಶ್ ಮುಖ್ಯ ಭಾಷಣ ಮಾಡಲಿದ್ದು ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮುಂಜು, ಹೊಸೂರು ಗ್ರಾ.ಪಂ. ಅಧ್ಯಕ್ಷೆ ಮಂಜುಳ ಮಂಜುನಾಥ್, ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ದಯಾನಂದ್, ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ.ಪೂ. ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಪ್ರಮುಖರಾದ ಕುಮಾರಸ್ವಮಿ, ಗಂಗಾಧರ್, ಲಕ್ಷö್ಮಣ್, ಹರೀಶ್ ಲಕ್ಷö್ಮಣ್ ಎಚ್.ಎನ್. ದೇವರಾಜ್, ಶಿವರಾಜ್ ಮುಂತಾದವರು ಭಾಗವಹಿಸಲಿದ್ದಾರೆ...