ವೀರಾಜಪೇಟೆ, ನ. ೨೧: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಯ ಕುರಿತು ವೀರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕೆಕೆ ಗ್ರೂಪ್ ಸಭಾಂಗಣದಲ್ಲಿ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಧಾರ್ಮಿಕ ಸಂಸ್ಥೆಗಳ ವಿಚಾರದ ಕುರಿತಂತೆ ಕ್ಷೇತ್ರದ ಜನತೆಯ ಪರವಾಗಿ ಆಗಮಿಸಿದ ಮುಖಂಡರಿAದ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ಮಾತನಾಡಿದ ಶಾಸಕರು, ನಮ್ಮ ಸರಕಾರ ಎಲ್ಲಾ ಧರ್ಮದವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಾ ಎಲ್ಲಾ ಸಮಾಜದ ಅಭಿವೃದ್ಧಿಗೆ ಕೈಜೋಡಿಸಲು ಸಿದ್ಧವಿದೆ. ಅದರಲ್ಲೂ ವಿಶೇಷವಾಗಿ ನಮ್ಮ ನಾಡಿನ ಜನತೆ ನಂಬಿಕೊAಡು ಬಂದಿರುವ ಆಚಾರ-ವಿಚಾರಗಳು ಹಾಗೂ ಧಾರ್ಮಿಕತೆಗೆ ಸಂಬAಧಪಟ್ಟ ಹಾಗೆ ಯಾವುದೇ ಕುಂದು ಕೊರತೆಗಳಿದ್ದಲ್ಲಿ ತಮ್ಮ ಗಮನಕ್ಕೆ ತಂದು ಅತೀ ಶೀಘ್ರದಲ್ಲಿ ಅದನ್ನು ಪರಿಹರಿಸಿಕೊಡುವ ಜವಾಬ್ದಾರಿ ತಾನು ವಹಿಸಿಕೊಳ್ಳುತ್ತೇನೆ. ಅಲ್ಲದೆ ವೀರಾಜಪೇಟೆ ಜೈನರ ಬೀದಿಯ ನಾಗನಕಟ್ಟೆ ಮತ್ತು ಉದ್ಯಾನವನದ ಕಾಮಗಾರಿ ಅತೀ ಶೀಘ್ರವಾಗಿ ಆರಂಭಗೊಳ್ಳುತ್ತದೆ ಎಂದು ಇದೇ ಸಂದರ್ಭ ಭರವಸೆ ನೀಡಿದರು. ವೀರಾಜಪೇಟೆ ವಿಧಾನ ಸಭಾ ವ್ಯಾಪ್ತಿಯ ಅನೇಕ ಧಾರ್ಮಿಕ ಮುಖಂಡರು, ಸಂಬAಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಆಗಮಿಸಿ ನೇರವಾಗಿ ಪರಿಹಾರ ಕಂಡುಕೊಳ್ಳಲು ಮನವಿ ಮಾಡಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಕೆ.ಕೆ. ಗ್ರೂಪ್ ಮಾಲೀಕ ಕಾಣತಂಡ ಜಗತ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರುಗಳು ಹಾಗೂ ಇನ್ನಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.