ಮಡಿಕೇರಿ, ನ. ೨೧: ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗ ಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೆೆÃಳಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟಿçÃಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ನಡೆದ ರಾಷ್ಟಿçÃಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟç, ಅಂತರರಾಷ್ಟಿçÃಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದು ಹೇಳಿದರು.
ಸಾಹಿತಿ ಉ.ರಾ. ನಾಗೇಶ್ ಮಾತನಾಡಿ ಪುಸ್ತಕಗಳು ಜ್ಞಾನವನ್ನು ವೃದ್ಧಿಸಲು ಸಹಕಾರಿ. ಭಾಷೆ, ಬರಹ, ಬಣ್ಣ, ಭಾವನೆ ಇವು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಪುಸ್ತಕಗಳು ಇಲ್ಲದಿದ್ದರೆ ಇತಿಹಾಸ ಹಾಗೂ ವಿಜ್ಞಾನದ ಮಹತ್ವವನ್ನು ತಿಳಿಯುವುದು ಕಷ್ಟಸಾಧ್ಯವಾಗುತಿತ್ತು. ಆದ್ದರಿಂದ ಪುಸ್ತಕಗಳು ಭವಿಷ್ಯದ ಆಧಾರ ಸ್ತಂಭಗಳು ಎಂದು ಉ.ರಾ. ನಾಗೇಶ್ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕÀ ಸಿ. ರಂಗಧಾಮಪ್ಪ ಮಾತನಾಡಿ, ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿಗೆ ಸರ್ಕಾರದಿಂದ ಪ್ರೋತ್ಸಾಹಿಸಲಾಗುತ್ತಿದೆ. ಪಿಎಂಶ್ರೀ ಮೂರು ಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯ ನಿರ್ವಹಿಸಲಾಗುತ್ತಿದೆ. ಸಾರ್ವಜನಿಕ ಗ್ರಂಥಾಲಯ, ಗ್ರಾಮ ಪಂಚಾಯಿತಿ ಗ್ರಂಥಾಲಯ ಇವುಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆÀ ಪಿ.ಆರ್. ವಿಜಯ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ರೇಣುಶ್ರೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕÀ ಡಾ. ಪ್ರಕಾಶ್ ಎಂ.ಎನ್., ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ, ಕೋರಂಗಾಲ ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕಿ ನಾಗವೇಣಿ, ಸಹಾಯಕ ಗ್ರಂಥಪಾಲಕ ವಿಜಯ್ನಾಗ್ ಇತರರು ಇದ್ದರು.