ಮಡಿಕೇರಿ, ನ. ೨೧: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು ೧೯೬೭ ರ ನಿಯಮ ೧೦-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ತಾ.೨೩ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿಡ್ತ, ಕುಶಾಲನಗರ ತಾಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟೆçÃಟರಿಗೆ ಒಪ್ಪಿಸತಕ್ಕದ್ದು.
ಈ ಆದೇಶವು ಉಪ ಚುನಾವಣೆ ನಡೆಯುವ ಸಂಬAಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಾ.೨೩ ರವರೆಗೆ ಅಥವಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.