ಮಡಿಕೇರಿ, ನ. ೨೧: ಗ್ರಾಮ ಪಂಚಾಯಿತಿ ಉಪ ಚುನಾವಣೆ ೨೦೨೪ ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ ಪ್ರಕರಣ ೩೬ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರಡಿಯಲ್ಲಿ ದತ್ತವಾಗಿರುವ ಅಧಿಕಾರದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿಡ್ತ, ಕುಶಾಲನಗರ ತಾಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಾ.೨೨ ರ ಮಧ್ಯರಾತ್ರಿ ೧೨ ಗಂಟೆಯಿAದ ತಾ.೨೩ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.