ಪಾಕಿಸ್ತಾನದಲ್ಲಿ ಗುಂಡಿನ ದಾಳಿ-೫೦ ಮಂದಿ ಸಾವು
ಪೇಶಾವರ, ನ. ೨೧: ವಾಯುವ್ಯ ಪಾಕಿಸ್ತಾನದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೂರು ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ೫೦ ಮಂದಿ ಸಾವನ್ನಪ್ಪಿದ್ದಾರೆ ಮತ್ತು ೧೪ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯಲ್ಲಿ ಉಗ್ರರು ವಾಹನಗಳ ಮೇಲೆ ಮನಬಂದAತೆ ಗುಂಡಿ ದಾಳಿ ನಡೆಸಿದ್ದಾರೆ. ಈ ವಾಹನಗಳು ಪರಾಚಿನಾರ್ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೇಶಾವರಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದಾಳಿಯಲ್ಲಿ ಆರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ೫೦ ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ ೧೪ ಜನ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಪಂಥೀಯ ಹಿಂಸಾಚಾರಕ್ಕೂ ಈ ದಾಳಿಗೂ ನಂಟು ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸರಿಸುಮಾರು ೧೦ ದಾಳಿಕೋರರು ರಸ್ತೆಯ ಎರಡೂ ಬದಿಗಳಿಂದ ಮನಬಂದAತೆ ವಾಹನಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಪ್ರಶ್ನಿಸಿ ಮೇಲ್ಮನವಿ
ಬೆಂಗಳೂರು, ನ. ೨೧: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ವಿವಾದಿತ ಭೂಮಿ ಮಾರಾಟ ಮಾಡಿದ್ದ ಜೆ. ದೇವರಾಜು ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಮುಡಾ ಪ್ರಕರಣದ ತನಿಖೆಗೆ ಅನುಮತಿಸುವ ಮೂಲಕ ತಾವು ವಿನಾಕಾರಣ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸುವಂತಾಗಿದೆ ಎಂದು ದೇವರಾಜು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ಅವರು, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಹಾಜರಾಗಿ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನವೆಂಬರ್ ೨೩ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.
ಪಡಿತರ ಚೀಟಿ ಪರಿಷ್ಕರಣೆ ಗೊಂದಲ-ಸಚಿವರ ಸ್ಪಷ್ಟನೆ
ಬೆಂಗಳೂರು, ನ. ೨೧: ಪಡಿತರ ಚೀಟಿ ಪರಿಷ್ಕರಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ, ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, ಬಿಪಿಎಲ್, ಎಪಿಎಲ್ ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು ೧,೫೦,೫೯,೪೩೧ ಕಾರ್ಡ್ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್ಗಳನ್ನು ಮರು ಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ ೧,೦೨,೫೦೯ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಬಿಪಿಎಲ್ಗೆ ಅರ್ಹರಿದ್ದೂ ಕೂಡ ಎಪಿಎಲ್ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ. ಬಿಪಿಎಲ್ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್ ಮರುಹಂಚಿಕೆ ಮಾಡುತ್ತೇವೆ ಎಂದರು.
ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು, ನ. ೨೧: ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಬೆಂಗಳೂರಿನ ಅಬಕಾರಿ ಸೂಪರಿಂಟೆAಡೆAಟ್ ಮೋಹನ್ ಕೆ. ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆಗಳು, ಅವರ ಆಪ್ತರ ಮನೆಗಳು ಸೇರಿದಂತೆ ೨೫ ಸ್ಥಳಗಳ ಮೇಲೆ ಗುರುವಾರ ಬೆಳಿಗ್ಗೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ. ತಿಪ್ಪೇಸ್ವಾಮಿ ಮತ್ತು ಮಂಡ್ಯ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ದಾಳಿಗೊಳಗಾದ ಇತರ ಅಧಿಕಾರಿಗಳು. ನಾಲ್ವರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-೧, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲಾ ಘಟಕಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಆರೋಪಿ ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.