ಮಡಿಕೇರಿ, ನ. ೨೧: ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದನ್ವಯ ಜಿಲ್ಲೆಯಲ್ಲಿ ಡಿಸೆಂಬರ್ ೧೩ ರಂದು ರಾಷ್ಟಿçÃಯ ಲೋಕ ಅದಾಲತ್ ನಡೆಯಲಿದೆ.
ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ರಾಜೀ ಸಂಧಾನದಲ್ಲಿ ಪಾಲ್ಗೊಂಡು, ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂಸ್ವಾಧೀನ, ಬ್ಯಾಂಕ್ ವಸೂಲಾತಿ, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಂಎAಆರ್ಡಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜಿಗಾಗಿ ಗುರುತಿಸಲಾಗಿದೆ.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬAಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತ ವಾಗಿಯೇ ರಾಜೀ ಸಂಧಾನದಿAದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ, ಅವರ ಮನ ಒಲಿಸಿ, ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸ ಲಾಗುವುದು.
ಪ್ರಕರಣಗಳಿಗೆ ಸಂಬAಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ ೧೩ ರಂದು ನಡೆಯುವ ರಾಷ್ಟಿçÃಯ ಲೋಕ ಅದಾಲತ್ನಲ್ಲಿ ಪಾಲ್ಗೊಂಡು, ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.