ನಾಪೋಕ್ಲು, ನ. ೨೧: ಕರ್ನಾಟಕ ಸುವರ್ಣ ಸಂಭ್ರಮ ೫೦ ಇದರ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಎಲ್‌ಜಿ ಕ್ರೆಸೆಂಟ್ ಶಾಲೆ ಮಡಿಕೇರಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಎಎಲ್‌ಜಿ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತ ಗಾಯನ ಹಾಗೂ ರಸಪ್ರಶ್ನೆ ಕ್ರಾಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲೆಯ ಅಧ್ಯಕ್ಷ ನಿಜಾಮುದ್ದೀನ್ ಸಿದ್ದಿಕ್, ಕ.ಸಾ.ಪ. ಗೌರವ ಅಧ್ಯಕ್ಷ ಮುನೀರ್ ಅಹಮದ್ ಮತ್ತಿತರರು ಭಾಗವಹಿಸಲಿದ್ದಾರೆ.