ಸುಂಟಿಕೊಪ್ಪ, ನ. ೨೧: ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು-ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಾಗಾರದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯಪೇದೆ ವಿವೇಕ್ ಮಾತನಾಡಿ ಅಗತ್ಯ ವಿವರ ನೀಡಿದರು.

ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಾಲಿನಿ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು, ಶಿರಂಗಾಲ, ಕಾನ್‌ಬೈಲ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತೀಜ, ಸೇವಾಪ್ರತಿನಿಧಿ ಯಶೋಧ ಮಾತನಾಡಿದರು.

ಭೂಮಿಕಾ ತಂಡದ ಸದಸ್ಯರು ಜವಾಬ್ದಾರಿಯನ್ನು ನಿರ್ವಹಿಸಿದರು.