ಮಡಿಕೇರಿ, ನ. ೨೭: ಪ್ರಸಕ್ತ ವರ್ಷ ಜೂನ್ ತಿಂಗಳಿನಿAದ ಆರಂಭಗೊAಡ ಮುಂಗಾರು ಮಳೆ ಸತತವಾಗಿ ಹಲವು ತಿಂಗಳ ಕಾಲ ಸುರಿಯವುದರೊಂದಿಗೆ ಜಿಲ್ಲೆಯನ್ನು ತತ್ತರಿಸುವಂತೆ ಮಾಡಿತ್ತು. ಇದೀಗ ಕೆಲ ದಿನಗಳಿಂದ ಬಿಸಿಲಿನ ಸನ್ನಿವೇಶ ಎದುರಾಗಿದೆಯಾದರೂ ಇದೀಗ ಮತ್ತೊಮ್ಮೆ ಮಳೆಯ ಆತಂಕ ಎದುರಾಗುತ್ತಿದೆ. ಬಂಗಾಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿನ ಬದಲಾವಣೆಯಿಂದಾಗಿ ಕೊಡಗು ಜಿಲ್ಲೆಯಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ಡಿಸೆಂಬರ್ ೧ ರಿಂದ ೧೧ರ ತನಕ ಮಳೆ ಹೆಚ್ಚಿರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖಾ ಮುನ್ಸೂಚನೆಯಿದೆ. ತಮಿಳುನಾಡಿನಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಚೆನ್ನೆöÊ ಮತ್ತಿತರ ಕಡೆಗಳಲ್ಲಿ ರಭಸದ ಮಳೆಯಾಗುತ್ತಿದ್ದರೆ ಪುದುಚೇರಿ, ಬೆಂಗಳೂರಿನಲ್ಲೂ ಮಳೆಯಾಗುತ್ತದೆ. ಈಗಾಗಲೇ ಜಿಲ್ಲೆಯಲ್ಲೂ ಮೋಡಕವಿದ ವಾತಾವರಣ ಕಂಡು ಬರುತ್ತಿದೆ.
ಪೆಂಗಲ್ ಚಂಡಮಾರುತ
ಬAಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಪೆಂಗಲ್ ಚಂಡಮಾರುತ ತಮಿಳುನಾಡಿನೆಡೆಗೆ ಸಾಗಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಡಿಸೆಂಬರ್ ೧ ರಿಂದ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,
(ಮೊದಲ ಪುಟದಿಂದ) ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನೊಂದೆಡೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯೂ ನಿಧಾನವಾಗಿ ಹೆಚ್ಚುತ್ತಿದೆ. ಕೊಡಗಿನಲ್ಲಿಯೂ ರಾತ್ರಿ ವೇಳೆ ಹಾಗೂ ಬೆಳಿಗ್ಗೆ ಚಳಿ ಹೆಚ್ಚುತ್ತಿದೆ.