ಮಡಿಕೇರಿ, ನ. ೨೭: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು ೨೦೨೩-೨೪ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ. ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೩೦ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಲಯನ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ವಹಿಸಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಉದ್ಘಾಟಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಭಾಗವಹಿಸಲಿದ್ದಾರೆ. ಅಪರಾಹ್ನ ೨ ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ೨೦೨೩ -೨೪ನೇ ಸಾಲಿನಲ್ಲಿ ೧೦ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಯು. ಅದವಿಯಾ ಅವರಿಗೆ ಟಿ.ಪಿ. ರಮೇಶ್ ದತ್ತಿನಿಧಿ ಪ್ರಶಸ್ತಿ ನೀಡಲಾಗುವುದು.