ಸೋಮವಾರಪೇಟೆ, ನ. ೨೮: ಕನ್ನಡ ಸಿರಿ ಸ್ನೇಹ ಬಳಗದ ಜಿಲ್ಲಾ ಹಾಗೂ ತಾಲೂಕು ಘಟಕ ಮತ್ತು ಶ್ರೀ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಕೇರ್ ಟ್ರೆöÊನಿಂಗ್ ಸೆಂಟರ್ ವತಿಯಿಂದ ತಾ. ೨೯ರಂದು (ಇಂದು) ಟ್ರೆöÊನಿಂಗ್ ಸೆಂಟರ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಚಿತ್ರ ಗೀತೆಗಳ ಗಾನ ಲಹರಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ೧.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್ ಉದ್ಘಾಟಿಸಲಿದ್ದು, ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಹೆಚ್.ಜೆ. ಜವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್‌ಸಾಗರ್, ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಹೆಚ್. ಹುಚ್ಚೇಗೌಡ, ಟ್ರೆöÊನಿಂಗ್ ಸೆಂಟರ್‌ನ ಅಲೀಮಾ ಸುಲೈಮಾನ್, ಕರವೇ ಅಧ್ಯಕ್ಷ ಕೆ.ಎನ್. ದೀಪಕ್, ಹಿರಿಯ ಕಲಾವಿದ ಪೀಟರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.