ನಾಪೋಕ್ಲು, ನ. ೨೮: ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಡಿಕೇರಿ ತಾಲೂಕು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕಚೇರಿ ಮತ್ತು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಉದ್ಘಾಟನಾ ಸಮಾರಂಭ ತಾ. ೨೯ ರಂದು (ಇಂದು) ಬೆಳಿಗ್ಗೆ ನಡೆಯಲಿದೆ.