ಕೂಡಿಗೆ, ನ. ೨೮: ಕುಶಾಲನಗರ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗದೆ ಕಚೇರಿಯ ಸಿಬ್ಬಂದಿಗಳನ್ನು ಸಭೆಗೆ ಕಳುಹಿಸಿದ ಹಿನ್ನೆಲೆಯಲ್ಲಿ ಮುಂದಿನ ಸಭೆಗಳಿಗೆ ಸಂಬAಧಿಸಿದ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಿ ಸಮರ್ಪಕವಾದ ಯೋಜನೆಗಳ ಮಾಹಿತಿಯನ್ನು ಸಭೆಗೆ ಒದಗಿಸುವಂತೆ ಖಡಕ್ ಎಚ್ಚರಿಕೆಯನ್ನು ವಿ.ಪಿ. ಶಶಿಧರ್ ನೀಡಿದರು. ತಾಲೂಕು ಶಿಶು ಅಭಿವೃದ್ಧಿಯೋಜನಾಧಿಕಾರಿ ಸಭೆಗೆ ಹಾಜರಾಗದೆ ಕಚೇರಿಯ ಕಂಪ್ಯೂಟರ್ ಸಿಬ್ಬಂದಿಯನ್ನು ಮತ್ತು ಕೆ.ಎಸ್.ಆರ್.ಟಿ.ಸಿ. ಘಟಕದ ವ್ಯವಸ್ಥಾಪಕರ ಬದಲಿಗೆ ಸಿಬ್ಬಂದಿಯನ್ನು ಕಳುಹಿಸಿದ ಬಗ್ಗೆ ಆಕ್ಷೇಪಿಸಿದರು.
ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮುಖೇನ ನೋಟಿಸ್ ನೀಡುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಚೆಸ್ಕಾಂ, ಆಹಾರ ಇಲಾಖೆಯ ಅಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿ ವರ್ಗದವರು ಸಭೆಗೆ ಸಂಬAಧಿಸಿದ ಯೋಜನೆಯ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಅಧ್ಯಕ್ಷತೆ ವಹಿಸಿದ ವಿ.ಪಿ. ಶಶಿಧರ್ ಮಾತಾನಾಡಿ, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಗ್ಯಾರಂಟಿ ಯೋಜನೆಯನ್ನು ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ಜಿಲ್ಲಾ ಸಮಿತಿ ಸದಸ್ಯ ಅಣ್ಣಯ್ಯ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣಗೌಡ, ಹೆಚ್.ಎನ್. ರಾಜಶೇಖರ್, ಫಿಲೋಮಿನಾ, ಶ್ರೀನಿವಾಸ್ ಕುಮಾರ್, ಅಬ್ದುಲ್ ರಜಾಕ್, ಕಿಶೋರ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಸೇರಿದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.