ಸಿದ್ದಾಪುರ, ನ. ೨೮: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟಿçÃಯ ಭಾವೈಕ್ಯತೆ ಸಾರುವ ‘ತ್ರಿವರ್ಣ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರ ಅವರು ರಾಷ್ಟçಧ್ವಜ, ಗೀತೆ, ಲಾಂಛನ ಚಿಹ್ನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಿಕ ಪ್ರಶ್ನೋತ್ತರ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಉದ್ಘಾಟಿಸಿದರು. ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಈಗಾಗಲೇ ಸಂಘದಿAದ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ವನಮಹೋತ್ಸವ, ಮಕ್ಕಳ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ ಸೇರಿದಂತೆ ವಿವಿಧ ಕಾರ್ಯಕ್ರಮ ನಡಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ರಾಷ್ಟಿçÃಯ ಭಾವೈಕ್ಯತೆ ಮೂಡಿಸಲು ಹಾಗೂ ಜಾಗೃತಗೊಳಿಸುವ ನಿಟ್ಟಿನಲ್ಲಿ ತ್ರಿವರ್ಣ ಎಂಬ ವಿಶೇಷ ಕಾರ್ಯಕ್ರಮದಡಿ ವಿವಿಧ ಶಾಲೆಗಳಲ್ಲಿ ಉಪನ್ಯಾಸ ನೀಡಲಾಗುತ್ತಿದೆ ಎಂದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮ, ಮುಖ್ಯೋಪಾಧ್ಯಾಯಿನಿ ನಿರ್ಮಲ, ತಾಲೂಕು ಸಂಘದ ಕಾರ್ಯದರ್ಶಿ ಎ.ಎಸ್. ಮುಸ್ತಫ, ಸದಸ್ಯರಾದ ಪಿ.ವಿ. ಆಂಟೋನಿ, ಕಾರ್ಯಕ್ರಮದ ಸಂಚಾಲಕ ಎಂ.ಎ. ಕೃಷ್ಣ ಹಾಜರಿದ್ದರು.