ಮಡಿಕೇರಿ, ನ. ೨೮: ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಅಧಿವೇಶನದುದ್ದಕ್ಕೂ ನಿಗದಿತ ಸಮಯಕ್ಕೆ ಹಾಜರಾಗಿ ಮೆಚ್ಚುಗೆ ಗಳಿಸಿದ್ದಾರೆ. ಈ ಸಂಬAಧ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ನೆನಪಿನ ಕಾಣಿಕೆ ನೀಡಿ ಅವರನ್ನು ಗೌರವಿಸಿದ್ದಾರೆ.