ಮಡಿಕೇರಿ, ನ. ೨೮: ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್(ಡಿಸಿಎA ತರಬೇತಿ) ಸಂಸ್ಥೆಯಲ್ಲಿ ೬ ತಿಂಗಳ (ಡಿಸಿಎಂ) ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯು ಇದೇ ಜನವರಿ ೧ ರಿಂದ ಪ್ರಾರಂಭವಾಗಲಿದೆ.
ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕುಗಳು ಡಿಸಿಎಂ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರಲಿದ್ದು, ಅರ್ಹರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಮಾಸಿಕ ರೂ. ೬೦೦ ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ. ೫೦೦ ಶಿಷ್ಯವೇತನ ನೀಡಲಾಗುತ್ತದೆ. ಉಚಿತ ವಸತಿ ಗೃಹ ಸೌಲಭ್ಯವಿದೆ.
ಸಹಕಾರ ಸಂಘ-ಸAಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು ಹಾಗೂ ಖಾಸಗಿ ಅಭ್ಯರ್ಥಿಗಳಿಗೂ ಅವಕಾಶವಿದೆ. ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ. ರಿಯಾಯಿತಿ ದರದಲ್ಲಿ ಡಿಸಿಎಂ ಪಠ್ಯ ಪುಸ್ತಕಗಳನ್ನು ನೀಡಲಾಗುವುದು.
ದೂರಶಿಕ್ಷಣ (ಡಿಸಿಎಂ) (ಸಹಕಾರ ಸಂಘ-ಸAಸ್ಥೆ/ಬ್ಯಾAಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ) ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆ.ಸಿ.ಎಸ್ ನಿಯಮ ೧೭(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯ ಬೇಕಾಗುತ್ತದೆ. ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‌ವರೆಗೆ ಎರಡು ಅಧಿವೇಶನಗಳು ಸಂಪರ್ಕ ರಹಿತ ಕೋರ್ಸ್ ಪ್ರವೇಶಕ್ಕೆ ಅವಕಾಶ ಅಧ್ಯಯನ ಸಾಹಿತ್ಯ ನೀಡಲಾಗುವುದು. ೧೦ ದಿನಗಳ ಸಂಪರ್ಕ ತರಗತಿಗಳು, ಪದೋನ್ನತಿ ಹಾಗೂ ವಾರ್ಷಿಕ ಬಡ್ತಿಗೆ ಉಪಯುಕ್ತ ಪ್ರವೇಶಾತಿಗೆ ಆನ್‌ಲೈನ್ ಲಿಂಕ್: Websiಣe: ತಿತಿತಿ.ಞsಛಿಜಿಜಛಿm.ಛಿo.iಟಿ
ಅರ್ಜಿ ಫಾರಂ ದೊರೆಯುವ ಸ್ಥಳ ಮತ್ತು ವಿಳಾಸ: ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -೫೭೧೨೦೧. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಯೂನಿಯನ್. ಹೆಚ್ಚಿನ ಮಾಹಿತಿಗೆ ದೂ.ಸಂ. ೮೭೯೨೬೨೮೪೩೭, ೯೬೬೩೧೫೩೯೨೨, ೮೭೬೨೯೨೫೮೬೨, ೮೭೬೨೧೧೦೯೫೨, ೯೮೪೫೩೧೮೩೬೪ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್‌ನ ಪ್ರಾಂಶುಪಾಲರಾದ ಡಾ. ಆರ್.ಎಸ್. ರೇಣುಕಾ ಅವರು ತಿಳಿಸಿದ್ದಾರೆ.