ಮಡಿಕೇರಿ, ನ. ೨೮: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೦ ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ. ಕವಿತಾ ಅವರು ತಿಳಿಸಿದ್ದಾರೆ.
ಆನ್‌ಲೈನ್ ವೆಬ್‌ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ. ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ @ಞಚಿಡಿಟಿಚಿಣಚಿಞಚಿ.gov.iಟಿ, ದೂರವಾಣಿ ಸಂಖ್ಯೆ: ೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.