ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್

ರಾಂಚಿ, ನ. ೨೮: ಜೆಎಂಎA ನಾಯಕ ಹೇಮಂತ್ ಸೊರೆನ್ ಅವರು ಗುರುವಾರ ಜಾರ್ಖಂಡ್‌ನ ೧೪ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ರಾಂಚಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಇಂಡಿಯಾ ಬ್ಲಾಕ್ ನಾಯಕರು ಸಹ ಭಾಗವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉಪಸ್ಥಿತರಿದ್ದರು. ಜೆಎಂಎA ನಾಯಕ ಸೊರೆನ್ ಅವರು ನಾಲ್ಕನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಜೆಎಂಎA ಅಧ್ಯಕ್ಷ ಮತ್ತು ಅವರ ತಂದೆ ಶಿಬು ಸೊರೆನ್ ಅವರನ್ನು ಭೇಟಿಯಾದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ೮೧ ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎA ನೇತೃತ್ವದ ಮೈತ್ರಿಕೂಟ ೫೬ ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ನೇತೃತ್ವದ ಎನ್‌ಡಿಎ ೨೪ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಮುದ್ರಣ ಮಾಧ್ಯಮ ಚಿರಸ್ಥಾಯಿ:ಕೆ.ವಿ. ಪ್ರಭಾಕರ್

ತುಮಕೂರು, ನ. ೨೮: ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ. ಎಲ್ಲಿಯವರೆಗೂ ಮುದ್ರಣ ಮಾಧ್ಯಮ ಇರುತ್ತದೋ ಅಲ್ಲಿಯವರೆಗೂ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಪತ್ರಿಕಾ ವಿತರಕರ ಸಂಘ ಆಯೋಜಿಸಿದ್ದ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪುರಸ್ಕೃತ ವಿತರಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪತ್ರಿಕಾ ಕ್ಷೇತ್ರದಲ್ಲಿ ನಿರಂತರ ನಿರ್ಲಕ್ಷö್ಯಕ್ಕೆ ಒಳಗಾಗಿದ್ದ ಪತ್ರಿಕಾ ವಿತರಕರ ಶ್ರಮವನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತೀ ವರ್ಷ ಒಂದು ಪ್ರಶಸ್ತಿಯನ್ನು ವಿತರಕರಿಗೆ ಮೀಸಲಿಟ್ಟರು. ಕಾರ್ಮಿಕ ಇಲಾಖೆ ವಿತರಕರ ನಿವೃತ್ತಿ ವಯಸ್ಸನ್ನು ೫೯ ವರ್ಷದಿಂದ ಹೆಚ್ಚಿಸಿ ೭೦ ವರ್ಷಕ್ಕೆ ನಿಗದಿ ಮಾಡಿರುವುದು ಸಚಿವ ಸಂತೋಷ್ ಲಾಡ್ ಅವರ ಕಾಳಜಿಗೆ ಉದಾಹರಣೆ ಎಂದರು.

ಬಿಜೆಪಿಯ ಬಣ ಸಂಘರ್ಷಕ್ಕೆ ಡಿ.ವಿ.ಎಸ್. ಬೇಸರ

ಬೆಂಗಳೂರು, ನ. ೨೮: ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಹಾಗೂ ನೋವಿನ ಸಂಗತಿ ಎಂದು ರಾಜ್ಯದ ಬಿಜೆಪಿಯ ಬಣ ಸಂಘರ್ಷಕ್ಕೆ ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಂದು ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕರ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ. ಈ ಬಗ್ಗೆ ಹೈಕಮಾಂಡ್‌ಗೆ ಎರಡು ಬಾರಿ ಪತ್ರ ಬರೆದರೂ ಅವರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಹೇಳಿದರು. ತಮ್ಮ ಪತ್ರಗಳ ಹೊರತಾಗಿಯೂ ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಲಾಕಪ್ ಡೆತ್ ಪ್ರಕರಣ-ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು

ಬೆಂಗಳೂರು, ನ. ೨೮: ಲಾಕಪ್ ಡೆತ್ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ ೫೫,೦೦೦ ರೂಪಾಯಿ ದಂಡ ವಿಧಿಸಲಾಗಿದೆ. ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಮಹೇಂದ್ರ ರಾಥೋಡ್ ಎಂಬವರನ್ನು ೨೦೧೬ರ ಮಾರ್ಚ್ ೧೯ ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದರು. ಈ ಸಾವಿನ ಕುರಿತಂತೆ ಅಪರಾಧ ತನಿಖಾ ಇಲಾಖೆ ತನಿಖೆಗೆ ಆದೇಶಿಸಿತ್ತು. ತನಿಖೆಯಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರರನ್ನು ತೀವ್ರವಾಗಿ ಥಳಿಸಿದ್ದು ಈ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬAದಿತ್ತು. ನಂತರ ೨೦೧೯ರ ಜುಲೈ ೧೮ರಂದು ಸಿಐಡಿ ಅಧಿಕಾರಿಗಳು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.

ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ

ನವದೆಹಲಿ, ನ. ೨೮: ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸಿಹಿ ಅಂಗಡಿ ಹಾಗೂ ಪಿವಿಆರ್ ಬಳಿ ಗುರುವಾರ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ರೋಹಿಣಿಯ ಪ್ರಶಾಂತ್ ವಿಹಾರ್‌ನ ಬನ್ಸಿ ಸ್ವೀಟ್ ಶಾಪ್ ಬಳಿ ಸ್ಫೋಟ ಸಂಭವಿಸಿತ್ತು. ಬೆಳಿಗ್ಗೆ ೧೧.೪೮ಕ್ಕೆ ಕರೆ ಸ್ವೀಕರಿಸಿದ ನಂತರ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಅಕ್ಟೋಬರ್ ೨೦ ರಂದು ರೋಹಿಣಿಯಲ್ಲಿ ಸಿಆರ್‌ಪಿಎಫ್ ಶಾಲೆಯ ಸ್ಫೋಟದಲ್ಲಿ ಕಂಡುಬAದ ರೀತಿಯ ಬಿಳಿ ಪುಡಿಯಂತಹ ವಸ್ತುವು ಸ್ಥಳದಲ್ಲಿ ಪತ್ತೆಯಾಗಿದೆ. ಬಾಂಬ್ ಡಾಟಾ ವಿಶ್ಲೇಷಣೆಗಾಗಿ ಎನ್‌ಎಸ್‌ಜಿ ತಂಡವನ್ನು ಕೋರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತನಿಖೆಯಲ್ಲಿ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ) ದೆಹಲಿ ಪೊಲೀಸರಿಗೆ ನೆರವು ನೀಡಲಿದೆ ಎಂದು ಮೂಲಗಳು ತಿಳಿಸಿವೆ.