ಮಡಿಕೇರಿ, ನ. ೨೮: ೨೦೨೩-೨೪ನೇ ಶೈಕ್ಷಣಿಕ ಸಾಲಿನ ೧೦ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಯು. ಅದವಿಯಾ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ಟಿ.ಪಿ. ರಮೇಶ್ ದತ್ತಿನಿಧಿ ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಈಕೆ ಉಮ್ಮರ್ ಸಿ.ಎಂ. ಮತ್ತು ಅಮೀನಾ ಕೆ.ಎ. (ಶಿಕ್ಷಕರು) ದಂಪತಿಯ ಪುತ್ರಿ.