ಕೂಡಿಗೆ, ನ. ೨೮: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಬಾಯಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಮಕ್ಕಳು ತಮ್ಮ ಶಾಲೆಗೆ ಸುಸಜ್ಜಿತ ಶೌಚಾಲಯ ಮತ್ತು ಮುಖ್ಯ ರಸ್ತೆಯಿಂದ ಶಾಲೆಯವರೆಗಿನ ಉಪ ರಸ್ತೆಯ ದುರಸ್ತಿ ಸೇರಿದಂತೆ ಶಾಲೆಯ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಚರ್ಚಿಸಿದರು. ಸಭೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹೇಮಲತಾ ಅವರು ಮಕ್ಕಳ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ಒದಗಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಕಾರ್ಯದರ್ಶಿ ಕೆ.ಸಿ. ರವಿ, ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.