ಮಡಿಕೇರಿ, ನ. ೨೮ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವವು ತಾ.೩೦ ರಂದು ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.

ನಗರದ ಎಫ್‌ಎಂಕೆಎAಸಿ ಕಾಲೇಜಿನಲ್ಲಿ ಸಭಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರು, ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸAಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.