ಮಡಿಕೇರಿ, ನ. ೨೮: ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿಯಾದ ಶಶಾಂಕ್ ಅವರು ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಐ.ಎಫ್.ಸಿ.ಸಿ. ೨೦೨೪ ಅವರು ಆಯೋಜಿಸಿದ ಫಿಲ್ಟರ್ ಕಾಫಿ ತಯಾರಿಕೆಯ ಚಾಂಪಿಯನ್ ಸ್ಪರ್ಧೆಯಲ್ಲಿ ಬಹು ಸಂಖ್ಯೆಯ ಸ್ಪರ್ಧಿಗಳು ಭಾಗವಹಿಸಿದ್ದರು.

ಈ ಸ್ಪರ್ಧೆಯಲ್ಲಿ ಅಗಸ್ತö್ಯ ಕಾಫಿಯಲ್ಲಿ ತನ್ನ ವಿದ್ಯಾಭ್ಯಾಸದೊಂದಿಗೆ ಅರೆಕಾಲಿಕ ಉದ್ಯೋಗವನ್ನು ಮಾಡುತ್ತಿರುವ ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿಕಾಂನ ವಿದ್ಯಾರ್ಥಿಯಾದ ಶಶಾಂಕ್ ಪ್ರಥಮ ಸ್ಥಾನ ಪಡೆದು ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.