ಸೋಮವಾರಪೇಟೆ, ನ. ೨೮: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಕಾನೂನನ್ನು ಉಲ್ಲಂಘಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ತಡೆ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನಕ್ಷರತೆ, ಬಡತನ, ಮೂಢನಂಬಿಕೆ ಇಂತವುಗಳು ಬಾಲ್ಯ ವಿವಾಹಕ್ಕೆ ಕಾರಣವಾಗಿವೆ. ಬಾಲ್ಯ ವಿವಾಹ ತಡೆ ಜಾಗೃತಿಯಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು. ಬಾಲ್ಯ ವಿವಾಹದಂತಹ ಘಟನೆಗಳು ಕಂಡುಬAದಾಗ ವಿದ್ಯಾರ್ಥಿಗಳು ಕೂಡಲೇ ಸಂಬAಧಪಟ್ಟವರಿಗೆ ವಿಷಯ ಮುಟ್ಟಿಸಬೇಕು. ನಂತರ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ವಿಠಲ್ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ಅನೇಕ ಕಾಯಿದೆಗಳಿವೆ. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆ ಇನ್ನಿತರ ಕಾಯಿದೆಗಳಿದ್ದು, ಅದರಲ್ಲೂ ಪೋಕ್ಸೋ ಕಾಯಿದೆ ಕಠಿಣವಾಗಿದೆ. ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಡಬ್ಬಲ್ ಮೀನಿಂಗ್‌ನಲ್ಲಿ ಮಾತನಾಡುವುದು, ಹಿಂಬಾಲಿಸುವುದು, ಕೆಟ್ಟ ಸ್ಪರ್ಶ ಇವೆಲ್ಲವೂ ಪೋಕ್ಸೋ ಕಾಯಿದೆಯಡಿ ಬರುತ್ತವೆ. ಇಂತಹ ಕಿರುಕುಳಕ್ಕೆ ತುತ್ತಾದ ವಿದ್ಯಾರ್ಥಿನಿಯರು ಕೂಡಲೇ ಪೊಲೀಸ್ ಠಾಣಾ ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು. ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್ವೆಸ್, ಉಪನ್ಯಾಸಕ ಲಾಂಚನ್ ಕಾರೇಕಾರ್ ಇದ್ದರು. ಉಪನ್ಯಾಸಕರಾದ ಸೌಮ್ಯ, ಭವ್ಯ ಮತ್ತು ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.