ಮಡಿಕೇರಿ, ನ. ೨೮ : ಸಂಚಾರಿ ನಿಯಮಗಲ ಉಲ್ಲಂಘನೆ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆಯನ್ನು ನಗರ ಸಂಚಾರಿ ಠಾಣೆ ನೀಡಿದೆ.

ಮದ್ಯ ಸೇವಿಸಿ ವಾಹನ ಚಲಾಯಿಸುವುದು, ಅತೀ ವೇಗ, ದ್ವಿಚಕ್ರಗಳಲ್ಲಿ ತ್ರಿವಳಿ ಸವಾರಿ ಸಹಿತ ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡುತ್ತಿರುವ ಕುರಿತು ಸಂಚಾರಿ ಪೊಲೀಸ್ ಠಾಣೆಗೆ ದೂರುಗಳು ಹೆಚ್ಚಾಗಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವ ಪ್ರಕರಣಗಳ ಮೇಲೆ ಕಾನೂನು ರೀತ್ಯ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ, ಮದ್ಯ ಸೇವಿಸಿ ವಾಹನ ಚಾಲನೆ ಮಾಡದಂತೆ, ಅಪ್ರಾಪ್ತರಿಗೆ ವಾಹನಗಳನ್ನು ನೀಡದಂತೆಯೂ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದೆ. ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ, ಅದಕ್ಕೆ ಸಾರ್ವಜನಿಕರೇ ಹಕ್ಕು ಜವಾಬ್ದಾರರಾಗಿರುತ್ತಾರೆ ಎಂದು ಮಡಿಕೇರಿ ಸಂಚಾರಿ ಠಾಣೆ ತಿಳಿಸಿದೆ.