ಮಡಿಕೇರಿ, ನ. ೨೮: ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಮನರಂಜನಾ ಹಾಗೂ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಯಿತು.

ನಗರದ ರಾಜಾಸೀಟ್‌ನಲ್ಲಿರುವ ಸಾಹಸ ಕ್ರೀಡೆಗಳಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರದ ಮಕ್ಕಳು ಸಂಭ್ರಮದಿAದ ತೊಡಗಿಸಿಕೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾರ್ಯದರ್ಶಿ ಕಟ್ಟೆಮನೆ ಸೋನಜಿತ್ ಹಾಜರಿದ್ದರು.