ಕೂಡಿಗೆ, ನ. ೨೯: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಜಿಲ್ಲೆಯ ವಿದ್ಯಾರ್ಥಿ ಎಂ.ಬಿ. ಶರತ್ ಎಂಬ ವಿದ್ಯಾರ್ಥಿ ರಾಷ್ಟçಮಟ್ಟಕ್ಕೆ ಆಯ್ಕೆ ಗೊಂಡಿದ್ದಾನೆ. ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಸುಶೀಲಾ ಭೀಮಯ್ಯ ಅವರ ಮಗನಾಗಿರುವ ಇವರು, ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿ. ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ತರಬೇತಿಯನ್ನು ಕರಾಟೆಯ ಶಿಕ್ಷಕ ಪ್ರಮೋದ್ ನೀಡಿದ್ದಾರೆ.