ಸಿದ್ದಾಪುರ, ನ. ೨೯: ವೀರಾಜಪೇಟೆ ವಿಭಾಗದ ತಿತಿಮತಿ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಪಾಲಿಬೆಟ್ಟ, ಮಾಲ್ದಾರೆ ಮತ್ತು ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ, ಮೇಕೂರು ಹೊಸ್ಕೇರಿ ಮತ್ತು ಚೆನ್ನಯ್ಯನಕೋಟೆ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಓಡಾಡುತ್ತಾ, ಸುತ್ತಮುತ್ತಲಿನ ಕೃಷಿ ಜಮೀನುಗಳಿಗೆ ದಾಳಿ ಮಾಡುತ್ತ, ಕೃಷಿ ನಷ್ಟಪಡಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕಾರಣ, ಕಾಡಾನೆಗಳ ಹಿಂಡನ್ನು ಮರಳಿ ಕಾಡಿಗೆ ಓಡಿಸಲು ಡಿ. ೧ ಹಾಗೂ ಡಿ.೨ರಂದು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಯಾಚರಣೆಯಂದು ಪಂಚಾಯಿತಿ ವ್ಯಾಪ್ತಿಯ ತೋಟದ ಕಾರ್ಮಿಕರು ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ತಿತಿಮತಿ ವಲಯ ಅರಣ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.