ಪೊನ್ನಂಪೇಟೆ, ನ. ೨೯: ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆ ಶಿಬಿರಗಳು ವಿದ್ಯಾರ್ಥಿಗಳಿಗೆ ಸರಳ ಹಾಗೂ ಹೊಂದಾಣಿಕೆಯ ಜೀವನವನ್ನು ಕಲಿಸುವುದರ ಜೊತೆಗೆ ಗ್ರಾಮ ಜೀವನದ ಬಗ್ಗೆ ತಿಳುವಳಿಕೆ ಮೂಡಿಸುವಲ್ಲಿ ಮಹತ್ತರ ಪಾತ್ರವಹಿಸುತ್ತದೆ.

ರಾಷ್ಟಿçÃಯ ಸೇವಾ ಯೋಜನೆ ಶಿಬಿರದಲ್ಲಿ ಕಳೆಯುವ ೭ ದಿನಗಳು ವಿದ್ಯಾರ್ಥಿಗಳಿಗೆ ವಿಶಿಷ್ಟ ಅನುಭವವನ್ನು ನೀಡುವುದರ ಜೊತೆಗೆ, ಸರ್ವರನ್ನು ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುತ್ತದೆ.

ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಜೊತೆಗೆ ಇಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.

ಎನ್‌ಎಸ್‌ಎಸ್ ಅಧಿಕಾರಿ ಕೆ.ವಿ. ವಿಪ್ರ ನೀಲಮ್ಮ ಮಾತನಾಡಿ, ಶಿಬಿರ ನಡೆಸಲು ಸಹಕಾರ ನೀಡಿದ ಬಲ್ಯಮಂಡೂರು ಗ್ರಾಮ ಪಂಚಾಯಿತಿ, ತೂಚಮಕೇರಿ ಗ್ರಾಮಸ್ಥರು ಹಾಗೂ ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ೭ ದಿನಗಳ ಶಿಬಿರದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರಲ್ಲಿ ಅತ್ಯುತ್ತಮ ಶಿಬಿರಾರ್ಥಿಯಾಗಿ ಆಯ್ಕೆಯಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ದಿವಿನ್, ವಿನೋದ್ ಮತ್ತು ವಿಪಿನ್, ವಿದ್ಯಾರ್ಥಿನಿಯರಾದ ನಿರ್ಷಿತ ಮತ್ತು ಜೀವಿತ, ಉದಯೋನ್ಮುಖ ಎನ್.ಎಸ್.ಎಸ್. ವಿದ್ಯಾರ್ಥಿಗಳಾಗಿ ಆಯ್ಕೆಯಾದ ಜನನಿ ಮತ್ತು ಚಂದನ ಅವರಿಗೆ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬಲ್ಯಮಂಡೂರು ಗ್ರಾ.ಪಂ. ಉಪಾಧ್ಯಕ್ಷ ಆಲೆಮಾಡ ನವೀನ್, ಗ್ರಾ.ಪಂ. ಸದಸ್ಯ ಕೊಟ್ಟಂಗಡ ಅಯ್ಯಪ್ಪ, ಉಪಪ್ರಾಂಶುಪಾಲೆ ಎಂ.ಕೆ. ಪದ್ಮ, ಶಾಲೆಯ ಮುಖ್ಯ ಶಿಕ್ಷಕ ಸುಬ್ರಮಣಿ, ಎನ್‌ಎಸ್‌ಎಸ್ ಅಧಿಕಾರಿಗಳಾದ ವಿಪ್ರ ನೀಲಮ್ಮ, ಚೇತನ್ ಚಿಣ್ಣಪ್ಪ, ಉಪನ್ಯಾಸಕರಾದ ಕುಸುಮ್, ಲೆಫ್ಟಿನೆಂಟ್ ಎಂ.ಆರ್. ಆಕ್ರಂ, ಗ್ರಾಮಸ್ಥರಾದ ಪುಟ್ಟಂಗಡ ದಮಯಂತಿ ಗ್ರೇಸಿ, ಪೆಮ್ಮಂಡ ಪುಷ್ಪ, ಮಾದಪ್ಪ, ನಾಗೇಶ್ ಉಪಸ್ಥಿತರಿದ್ದರು.